ADVERTISEMENT

‘ಸಮಸ್ಯೆ ಬಗೆಹರಿಸಲು ಸದಾಸಿದ್ಧ’

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2022, 5:42 IST
Last Updated 20 ಫೆಬ್ರುವರಿ 2022, 5:42 IST
ಅಮೀನಗಡ ಸಮೀಪದ ಕಲ್ಲಗೋನಾಳ ಗ್ರಾಮದಲ್ಲಿ ನಡೆದ ಡಿಸಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಹುನಗುಂದ ತಹಸೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ಅವರಿಗೆ ಮಹಿಳೆಯೊಬ್ಬರು ತಮ್ಮ ಸಮಸ್ಯೆಗಳನ್ನು ಹೇಳಿದರು
ಅಮೀನಗಡ ಸಮೀಪದ ಕಲ್ಲಗೋನಾಳ ಗ್ರಾಮದಲ್ಲಿ ನಡೆದ ಡಿಸಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಹುನಗುಂದ ತಹಸೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ಅವರಿಗೆ ಮಹಿಳೆಯೊಬ್ಬರು ತಮ್ಮ ಸಮಸ್ಯೆಗಳನ್ನು ಹೇಳಿದರು   

ಅಮೀನಗಡ: ರಾಜ್ಯ ಸರ್ಕಾರದ ನಾನಾ ಯೋಜನೆಗಳು ಗ್ರಾಮಸ್ಥರ ಮನೆ ಬಾಗಿಲು ತಲುಪಿಸುವ ಉದ್ದೇಶದಿಂದ ಆರಂಭವಾದ ಡಿಸಿ ನಡಿಗೆ ಹಳ್ಳಿ ಕಡೆ ಎಂಬ ಕಾರ್ಯಕ್ರಮದ ಸಭೆ ಶನಿವಾರ ಸಮೀಪದ ಕಲ್ಲಗೋನಾಳ ಗ್ರಾಮದಲ್ಲಿ ಜರುಗಿತು.

ಹುನಗುಂದ ತಾಲೂಕಿನ ಕಲ್ಲಗೋನಾಳ ಗ್ರಾಮದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಗ್ರಾಮಕ್ಕೆ ಆಗಮಿಸಿದ ತಹಸೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ಅವರಿಗೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆ ಹೇಳಿಕೊಂಡರು.

ಸ್ಥಳೀಯರಾದ ಹನುಮವ್ವ ನನ್ನೂರು ಮಾತನಾಡಿ, ‘ಮಾನ್ಯ ತಹಸೀಲ್ದಾರ್ ಸಾಹೇಬ್ರೆ ನಮ್ಮ ಗ್ರಾಮಕ್ಕೆ ಸ್ಮಶಾನ ಇಲ್ಲ. ಗ್ರಾಮದಲ್ಲಿ ಯಾರಾದರೂ ಮರಣ ಹೊಂದಿದ್ದರೆ ಅವರ ಜಮೀನಿನಲ್ಲಿ ಅಥವಾ ಜಮೀನು ಇಲ್ಲದೆ ಇರುವ ವ್ಯಕ್ತಿಗಳನ್ನು ಹಳ್ಳದ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡುವ ಪರಿಸ್ಥಿತಿ ಇದೆ’ ಎಂದರು.

ADVERTISEMENT

ಈ ವೇಳೆ ತಹಸೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ಮಾತನಾಡಿ, ನಿಮ್ಮ ಸಮಸ್ಯೆಯನ್ನು ಬಗೆಹರಿಸಲು ನಾವು ನಿಮ್ಮ ಗ್ರಾಮಕ್ಕೆ ಬಂದಿದ್ದೇವೆ. ಸಾಧ್ಯವಾದರೆ ಎಲ್ಲಾ ಸಮಸ್ಯೆಯನ್ನು ಇಲ್ಲೇ ಬಗೆಹರಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು. ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.