
ಪ್ರಜಾವಾಣಿ ವಾರ್ತೆ
ಕಬ್ಬಿನ ಗದ್ದೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಬಾಗಲಕೋಟೆ: ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಕಬ್ಬಿನ ಹೊಲದಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದ್ದು, ಈ ಬಗ್ಗೆ ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ.5ರಂದು ಘಟನೆ ನಡೆದಿದ್ದು, ಸಾರ್ವಜನಿಕರು ಮಹಿಳೆ ಸ್ಥಿತಿ ಗಮನಿಸಿ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಹುನಗುಂದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬಾಗಲಕೋಟೆ ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಘಟನೆ ನಡೆದ ರಸ್ತೆ ಮತ್ತು ಗ್ರಾಮದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳ ಪರಿಶೀಲನೆ ನಡೆಸಿದ್ದು, ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.