ADVERTISEMENT

ಬಾಗಲಕೋಟೆ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2023, 13:57 IST
Last Updated 1 ಅಕ್ಟೋಬರ್ 2023, 13:57 IST
<div class="paragraphs"><p>ಪ್ರತಿಭ‌ಟನೆಯಲ್ಲಿ ಪಾಲ್ಗೊಂಡಿರುವ ಮಹಿಳೆಯರು</p></div>

ಪ್ರತಿಭ‌ಟನೆಯಲ್ಲಿ ಪಾಲ್ಗೊಂಡಿರುವ ಮಹಿಳೆಯರು

   

ಬಾಗಲಕೋಟೆ: ಮದ್ಯ ಮಾರಾಟ ನಿಷೇಧಿಸಬೇಕು ಹಾಗೂ ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾನುವಾರ ಮದ್ಯ ನಿಷೇಧ ಆಂದೋಲನ ಸದಸ್ಯರು ಭಾನುವಾರ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆವರೆಗೆ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದರು.

ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ, ರಾಜ್ಯ ಮಹಿಳಾ ಒಕ್ಕೂಟ ಸಹಯೋಗದಲ್ಲಿ ನಡೆಯುತ್ತಿರುವ ಪ್ರತಿಭ‌ಟನೆಯಲ್ಲಿ ಪಾಲ್ಗೊಂಡಿರುವ ಮಹಿಳೆಯರು, ಮದ್ಯ ಮಾರಾಟ ಪರವಾನಗಿ ನೀಡುವ ನಿರ್ಧಾರವನ್ನು ಕರ್ನಾಟಕ ಪಂಚಾಯತ್ ಕಾನೂನಿನ್ವಯ ಗ್ರಾಮಸಭೆಗೆ ಪರಮಾಧಿಕಾರ ಕೊಡಬೇಕು ಎಂದು ಆಗ್ರಹಿಸಿದರು.

ADVERTISEMENT

ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಂತೆ ಶೇ 10ರಷ್ಟು ಮಹಿಳೆಯರು ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಪರವಾನಗಿ ನೀಡಬಾರದು ಎಂದು ಗ್ರಾಮಸಭೆಯಲ್ಲಿ ನಿರ್ಧರಿಸಿದರೆ, ಸರ್ಕಾರ ಅದನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಹೊಸದಾಗಿ 1,000 ಮದ್ಯದಂಗಡಿಗಳಿಗೆ ಪರವಾನಗಿ ನೀಡುವ, ಸೂಪರ್ ಮಾರ್ಕೆಟ್‌, ಮಾಲ್‌ಗಳಲ್ಲಿ ಮಾರಾಟ ಮಾಡುವ ಪ್ರಸ್ತಾವವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಮಹಿಳೆಯರು ಮಾತ್ರವಲ್ಲ, ಸಮಾಜದ ನೆಮ್ಮದಿ, ಆರೋಗ್ಯ ಹಾಳು ಮಾಡುವ ವಿಚಾರಗಳನ್ನು ಬಿಟ್ಟು, ಮಹಾತ್ಮಾ ಗಾಂಧಿ ಆಶಯಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು.

ರೇಖಾ ದೊಡ್ಡಮನಿ, ಮಂಜುಳಾ ಹುಲ್ಲಿಕೇರಿ, ದುರ್ಗಮ್ಮ ವಡ್ಡರ, ರೇಣುಕಾ ಕುರಿ, ಸೌಮ್ಯ, ರೇಣುಕಾ, ಶಾಂತವ್ವ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.