
ಬೀಳಗಿ: ಮಹಿಳೆಯರ ಮತ್ತು ಯುವ ಸಮುದಾಯದ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ತಾಲ್ಲೂಕು ಸಮಿತಿಯ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಹೇಳಿದರು.
ತಾಲ್ಲೂಕಿನ ನಾಗರಾಳ, ಹೆಗ್ಗೂರ ಹಾಗೂ ಹೊಸ ಕೊರ್ತಿ ಗ್ರಾಮದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಸಾರ್ವಜನಿಕ ಕುಂದು ಕೊರತೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಸಾಮಾಜಿಕ ಚಿಂತನೆಯೊಂದಿಗೆ ಈ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ರೂಪಿಸಿದೆ ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಹನಮಂತ ಸೂಳಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಾಮಾನ್ಯರ ಆರ್ಥಿಕ ಸ್ಥಿತಿಗತಿ ಸುಧಾರಿಸಲು ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ ಎಂದರು.
ತಾಲ್ಲೂಕು ಪಂಚಾಯಿತಿ ಅಧಿಕಾರಿ ಮಾಹಾನಂದ ಭೂಷಗೊಂಡ , ಹೆಸ್ಕಾಂ ಇಲಾಖೆಯ ಎಇಇ ಮಂಜುನಾಥ ಬೋಕಿ, ಅಧಿಕಾರಿ ಮಹಾಂತೇಶ ಹೊನ್ಯಾಳ, ಆಹಾರ ಇಲಾಖೆಯ ಎ.ಎಲ್.ಸನದಿ, ಎಸ್.ಕೆ. ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಭಾಗ್ಯಾ ಜಾಧವ, ಕೆ.ಎಸ್.ಆರ್.ಟಿ.ಸಿ ಅಧಿಕಾರಿ ಮಹಾಂತೇಶ ಬಿರಾದಾರ ಇದ್ದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರಾದ ರಸೂಲ ಮುಜಾವಾರ, ಸದಾಶಿವ ಜುಂಜೂರಿ, ಎಂ.ಆರ್.ಪಾಟೀಲ, ಚಂದಶೇಖರ ಪಂಡರಿ, ವೆಂಕನಗೌಡ ಪಾಟೀಲ ಇದ್ದರು.
ಹೆಗ್ಗೂರ, ಹೊಸಕೊರ್ತಿ, ನಾಗರಾಳ ಗ್ರಾಮಗಳ ಪ್ರಮುಖರಾದ ಸತ್ಯಪ್ಪ ಮೇಲ್ನಾಡ, ಕಿರಣ ಬಾಳಾಗೋಳ, ರಾಜೇಂದ್ರ ದೇಶಪಾಂಡೆ, ಪಡಿಯಪ್ಪ ತಿರಕನ್ನವರ, ಗ್ರಾಮ ಪಂಚಾಯಿತಿ ಪಿಡಿಒ ರಮೇಶ ಮೆಲ್ನಾಡ, ಎನ್.ಬಿ.ದೆಸಂಗಿ, ಗೋಪಾಲ ಮಾಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.