ADVERTISEMENT

ಮಹಿಳಾ ದೌರ್ಜನ್ಯ | ಕಾನೂನು ಅರಿವು ಅಗತ್ಯ: ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 4:23 IST
Last Updated 28 ನವೆಂಬರ್ 2025, 4:23 IST
ಕೂಡಲಸಂಗಮ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನಾ ದಿನ, ಕಾನೂನು ಅರಿವು– ನೆರವು ಕಾರ್ಯಕ್ರಮವನ್ನು ಬಾಗಲಕೋಟೆ ಹಿರಿಯ ದಿವಾಣಿ ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ ಉದ್ಘಾಟಿಸಿದರು
ಕೂಡಲಸಂಗಮ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನಾ ದಿನ, ಕಾನೂನು ಅರಿವು– ನೆರವು ಕಾರ್ಯಕ್ರಮವನ್ನು ಬಾಗಲಕೋಟೆ ಹಿರಿಯ ದಿವಾಣಿ ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ ಉದ್ಘಾಟಿಸಿದರು   

ಕೂಡಲಸಂಗಮ: ‘ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ತಡೆಯುವ ಕಾರ್ಯ ಆಗಬೇಕು’ ಎಂದು ಬಾಗಲಕೋಟೆ ಹಿರಿಯ ದಿವಾಣಿ ನ್ಯಾಯಾಧೀಶ ಚಂದ್ರಶೇಖರ ದಿಡ್ಡಿ ಹೇಳಿದರು.

ಸ್ಥಳೀಯ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಅಂತರರಾಷ್ಟ್ರೀಯ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನಾ ದಿನ, ಕಾನೂನು ಅರಿವು– ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಪ್ರತಿಯೊಬ್ಬ ಮಹಿಳೆಯು ಮೂಲಭೂತ ಹಕ್ಕು, ಕರ್ತವ್ಯ, ಪೋಕ್ಸೋ, ವಿವಾಹ ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು. ಅವುಗಳ ಸೂಕ್ತ ಅನುಷ್ಠಾನದಿಂದ ಮಹಿಳೆಯರ ಮೇಲಿನ ದೌರ್ಜನ್ಯಗಳು ಕಡಿಮೆಯಾಗಲು ಸಾಧ್ಯ’ ಎಂದರು.

ಸಂಗಮೇಶ್ವರ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಬಿ.ಆರ್.ಚೌಗಲೆ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವಿದ್ಯಾರ್ಥಿಗಳು ಅಧ್ಯಯನ ವಯಸ್ಸಿನಲ್ಲಿ ಅಪರಾಧ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದು ಅಪಾಯಕಾರಿ. ತಡೆಯುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು. ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸುವ ಮೂಲಕ ಪರಿವರ್ತನೆ ಮಾಡವ ಜವಾಬ್ದಾರಿ ಎಲ್ಲರ ಮೇಲೆ ಇದೆ’ ಎಂದರು.

ADVERTISEMENT

ಮುಖ್ಯ ಅತಿಥಿಯಾಗಿ ಉಪನ್ಯಾಸಕ ಬಿ.ಬಿ.ಹಿರೇಗೌಡರ ಮಾತನಾಡಿದರು. ಉಪನ್ಯಾಸಕರಾದ ಜಿ.ಕೆ.ಕಡ್ಲಿಮಟ್ಟಿ, ಎಚ್.ಬಿ.ವನಕಿ, ಎಸ್.ಎಸ್.ವಂಟಮೂರಿ, ಎಸ್.ಆರ್.ಹಲಗಣಿ, ಮಹೇಶ ರಾಮಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.