ADVERTISEMENT

ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಳ: ಯತ್ನಾಳ ಆರೋಪ

ಗಾಯಾಳುಗಳನ್ನಿ ಭೇಟಿಯಾಗಿ ಧನ ಸಹಾಯ ಮಾಡಿದ ಶಾಸಕ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 6:21 IST
Last Updated 24 ಫೆಬ್ರುವರಿ 2026, 6:21 IST
ಬಾಗಲಕೋಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶೋಕ ಬಾರಕೇರ ಅವರ ಆರೋಗ್ಯವನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಚಾರಿಸಿದರು
ಬಾಗಲಕೋಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶೋಕ ಬಾರಕೇರ ಅವರ ಆರೋಗ್ಯವನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಚಾರಿಸಿದರು   

ಬಾಗಲಕೋಟೆ: ‘ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಿದೆ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.

ನಗರದ ಅಂಭಾಭವಾನಿ ದೇವಸ್ಥಾನ, ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗಳಲ್ಲಿ ಭೇಟಿಯಾಗಿ ಧನ ಸಹಾಯ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಟೀಕಿಸಿದರು.

ಪ್ರಧಾನಮಂತ್ರಿಗೆ ಮುತ್ತಿಗೆ ಹಾಕಲು ಮುಂದಾಗುವ ಮೂಲಕ ಸಂಸತ್ತಿನಲ್ಲೇ ಅವರಿಗೆ ಅವಮಾನ ಮಾಡಲು ಕಾಂಗ್ರೆಸ್ ಯತ್ನಿಸಿತು. ರಾಹುಲ್‌ ಗಾಂಧಿ ಪಾಕಿಸ್ತಾನ, ಚೀನಾ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

‘ಹಿಂದೂ ಕಾರ್ಯಕರ್ತರನ್ನು ಹೆದರಿಸುವ ಕೆಲಸ ಮೊದಲು ನಿಲ್ಲಿಸಬೇಕು. ಹಾಗೆ ಮಾಡಿದರೆ ಶಾಂತಿ ಆಗುವುದಿಲ್ಲ. ಐಪಿಎಸ್‌ ಅಧಿಕಾರಿಗೇ ಕಲ್ಲು ತೂರಿದರೂ ಸುಮ್ಮನೇ ಕೂಡುತ್ತಾರೆ ಎಂದರೆ ಹೇಗೆ? ಮಸೀದಿ ಜಮಾತ್ ಸದಸ್ಯರ ವಿರುದ್ದ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ದೇಶದಲ್ಲಿಯೇ ಗಲಭೆ ಎಬ್ಬಿಸುವ ಸಂಚು ನಡೆದಿದೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿನ್ನಡೆಯುಂಟು ಮಾಡಲು ಯತ್ನಿಸಲಾಗುತ್ತಿದೆ. ಈಗಾಗಲೇ ವಿಶ್ವದ ನಾಲ್ಕನೇ ಆರ್ಥಿಕ ಶಕ್ತಿಯಾಗಿದೆ. ಮುಂದಿನ ದಿನಗಳಲ್ಲಿ ಮೂರನೇ ಸ್ಥಾನಕ್ಕೆ ಏರಲಿದೆ’ ಎಂದರು.

‘ರಾಜಕೀಯದಲ್ಲಿ ಇನ್ನೂ 10 ರಿಂದ 15 ವರ್ಷ ಇರಬಹುದು. ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ನಿಲ್ಲಿಸುತ್ತೇನೆ ಎಂದು ಹೇಳುವುದಿಲ್ಲ. ಆದರೆ, ಕಡಿಮೆ ಮಾಡುತ್ತೇನೆ’ ಎಂದರು.

Quote - ಆಡಳಿತ ಸತ್ಯಾನಾಶವಾಗಿದೆ. ಮುಖ್ಯಮಂತ್ರಿ ಹುದ್ದೆಯ ಕಿತ್ತಾಟದಲ್ಲಿ ಕೆಲವು ವಿದೇಶಕ್ಕೆ ಹೋಗಿದ್ದಾರೆ. ಅಲ್ಲಿ ಅವರು ಭ್ರಷ್ಟಾಚಾರ ಎಷ್ಟಿದೆ ಎಂದು ಅಧ್ಯಯನ ಮಾಡಲಿದ್ದಾರೆಯೇ? ಬಸನಗೌಡ ಪಾಟೀಲ ಯತ್ನಾಳ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.