
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, ಗುರಿ-ಒಲಿಂಪಿಕ್ ಪದಕ, ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕ್ರೀಡಾಪಟುಗಳು ಡಿ.3ರೊಳಗೆ ಅಧಿಕೃತ ಜಾಲತಾಣ https://sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಿರಿ. ಅರ್ಜಿ ಸಲ್ಲಿಸುವಾಗ ಸಮಸ್ಯೆಗಳು ಎದುರಾದಲ್ಲಿ ಯುವ ಸಹಾಯವಾಣಿ: 155265 ಅನ್ನು ಸಂಪರ್ಕಿಸಬಹುದು ಎಂದು ಬಾಗಲಕೋಟೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.