ತೇರದಾಳ: ತಾಲ್ಲೂಕಿನ ಹನಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಗಟ್ಟಿಯ ಲಕ್ಷ್ಮಣ ಬಸಪ್ಪ ಕೊರವ (ಭಜಂತ್ರಿ) (16) ಯುವಕನನ್ನು ಯಾವುದೋ ದುರುದ್ದೇಶದಿಂದ ಅಪಹರಣ ಮಾಡಲಾಗಿದೆ ಎಂದು ಯುವಕನ ತಾಯಿ ರೇಣುಕಾ ಕೊರವ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಏ. 3ರಂದು ಬೆಳಿಗ್ಗೆ 6 ಗಂಟೆಗೆ ಲಕ್ಷ್ಮಣ ತೇರದಾಳದ ಅಂಬೇಡ್ಕರ್ ವೃತ್ತದಿಂದ ಚಿಕ್ಕೋಡಿ ತಾಲ್ಲೂಕಿನ ನೇಜ ಗ್ರಾಮಕ್ಕೆ ಹೋಗುವಾಗ ಅಪಹರಣ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ. ಪಿಎಸ್ಐ ಅಪ್ಪಣ್ಣ ಐಗಳಿ ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.