ಕೂಡ್ಲಿಗಿ: ತಾಲ್ಲೂಕಿನಾದ್ಯಂತ ರೈತರು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಸಾಗುವಳಿ ಮಾಡುತ್ತಿರುವುದನ್ನು ಪಟ್ಟಾ ಮಾಡಿಕೊಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕ ಒತ್ತಾಯಿಸಿದೆ.
ಈ ಕುರಿತು ಸೋಮವಾರ ತಹಶೀಲ್ದಾರ್ ಜವರೇಗೌಡರಿಗೆ ಮನವಿ ಸ್ಲ್ಲಲಿಸಲಾಯಿತು.
ತಾಲ್ಲೂಕಿನಲ್ಲಿ ವಿವಿಧೆಡೆ ರೈತರು ಕಳೆದ 20-50 ವರ್ಷಗಳಿಂದ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಸಾಗುವಳಿ ಮಾಡುತ್ತಿದ್ದು, ಈಚೆಗೆ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ.
ರೈತರು ಕೇವಲ 1 ಅಥವಾ 2 ಎಕರೆ ಜಮೀನನ್ನು ಸಾಗುವಳಿ ಮಾಡುತ್ತಿದ್ದು, ರೈತರನ್ನು ವಿನಾಕಾರಣ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಮನವಿಪತ್ರದಲ್ಲಿ ತಿಳಿಸಲಾಗಿದೆ. ತಾಲ್ಲೂಕಿನಾದ್ಯಂತ ಹಿಂದುಳಿದ ಬಡ ರೈತರಿದ್ದು, ಭೂಮಿಯೇ ಇಲ್ಲದವರಾಗಿದ್ದಾರೆ.
ಅವರಿಗೆ ಈ ಸಾಗುವಳಿಯಿಂದಲೇ ಅನುಕೂಲವಾಗುತ್ತಿದ್ದು, ಇದೀಗ ರೈತರಿಗೆ ತೊಂದರೆ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ತಕ್ಷಣವೇ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯ ನ್ಲ್ಲಿಲಿಸಿ, ಪಟ್ಟಾ ಮಾಡಿಕೊಡಬೇಕು, ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮನವಿ ಪತ್ರದಲ್ಲಿ ಎಚ್ಚರಿಸಲಾಗಿದೆ.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿ ರಂಗನಾಥ್, ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ರಾಜಶೇಖರಗೌಡ, ಉಪಾಧ್ಯಕ್ಷ ವಿ.ನಾಗರಾಜ, ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ನಾಯ್ಡು, ತಾಲ್ಲೂಕು ಅಧ್ಯಕ್ಷ ಎಂ.ಬಸವರಾಜ, ಕಾರ್ಯಾಧ್ಯಕ್ಷ ಎಸ್.ಬಾಷಾ, ಎಂ.ತಿಪ್ಪಣ್ಣ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.