ಕಂಪ್ಲಿ: ‘ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ಒದಗಿಸುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಕೆ.ಎಸ್. ಮಲ್ಲನಗೌಡ ತಿಳಿಸಿದರು.
ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಬಳಿಯ ಗುಂಟೂರು ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಸೋಮವಾರ ‘ದುಡಿಯೋಣ ಬಾ’ ಅಭಿಯಾನ ಕುರಿತು ಮಾತನಾಡಿ, ನರೇಗಾದಲ್ಲಿ 100 ದಿನ ಪೂರ್ಣಗೊಳಿಸಿದ ಕೂಲಿ ಕಾರ್ಮಿಕರಿಗೆ ಉನ್ನತಿ ಯೋಜನೆಯಡಿ ತರಬೇತಿ ನೀಡಲಾಗುವುದು ಎಂದರು.
ಈ ಯೋಜನೆಯಡಿ ಒಳಗೊಳ್ಳದೆ ಇರುವ ಕುಟುಂಬಗಳನ್ನು ಸಮೀಕ್ಷೆ ಮಾಡಿ ಅರ್ಹರಿಗೆ ಉದ್ಯೋಗ ಚೀಟಿ ವಿತರಿಸುವುದು. ಸ್ವ-ಸಹಾಯ ಗುಂಪುಗಳ ಮಹಿಳೆಯರಲ್ಲಿ ಯೋಜನೆಯ ಕುರಿತು ಅರಿವು ಮೂಡಿಸಿ, ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು. ಯೋಜನೆಯಿಂದ ಹೊರಗುಳಿದ ದುರ್ಬಲ ಕುಟುಂಬಗಳನ್ನು ಗುರುತಿಸಿ, ಯೋಜನೆಯ ಸೌಲಭ್ಯಗಳನ್ನು ದೊರಕಿಸಿ ಕೊಡುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ವಿವರಿಸಿದರು.
ಟಿಐಇಸಿ ಎಚ್.ಹನುಮೇಶ, ಬಿಎಫ್‍ಟಿ ಪಂಪಾಪತಿ, ಜಿಕೆಎಂ ಮಂಜುಳಾ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.