ADVERTISEMENT

ಕಾರು- ಬಸ್ ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 20 ಜುಲೈ 2012, 6:25 IST
Last Updated 20 ಜುಲೈ 2012, 6:25 IST

ಕುರುಗೋಡು: ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪ ಬುಧವಾರ ಸಂಭವಿಸಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮಿಡಿಗೇಸಿ ಗ್ರಾಮದ ಕಾರು ಚಾಲಕ ಮಂಜುನಾಥ (20) ಮತ್ತು ಚನ್ನಬಸವ (25) ಎಂದು ಗುರುತಿಸಲಾಗಿದೆ.

ಬಳ್ಳಾರಿ ಕಡೆಯಿಂದ ಲಿಂಗಸುಗೂರು ಕಡೆಗೆ ಚಲಿಸುತ್ತಿದ್ದ ಕಾರು ಸಿರುಗುಪ್ಪ ಕಡೆಯಿಂದ ಬಳ್ಳಾರಿ ಕಡೆಗೆ ಹೋಗುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗೆ ಡಿಕ್ಕಿಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 6 ಜನರಿಗೆ ಚಿಕ್ಕಪುಟ್ಟ ಗಾಯಗಳಾಗಿದೆ. ಪಿಎಸ್‌ಐ ಎಂ.ಜಿ.ನಾಗರಾಜ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.