ADVERTISEMENT

ತಹಶೀಲ್ದಾರ ಕಚೇರಿಗೆ ಮುತ್ತಿಗೆ

ಮಾನವ ಹಕ್ಕುಗಳ ಉಲ್ಲಂಘನೆ, ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ:ಖಂಡನೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2012, 8:36 IST
Last Updated 18 ಡಿಸೆಂಬರ್ 2012, 8:36 IST

ಹಗರಿಬೊಮ್ಮನಹಳ್ಳಿ :ಮಾನವ ಹಕ್ಕು ಗಳ ಉಲ್ಲಂಘನೆ ಸೇರಿದಂತೆ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಸೋಮವಾರ ಇಲ್ಲಿನ ತಹಶೀಲ್ದಾರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷೆ ಪಿ. ಚಾಂದಬೀ ಸುದ್ದಿಗಾರರೊಂದಿಗೆ ಮಾತ ನಾಡಿ, ದೇಶದ ಜನತೆಯ ಜೀವಿಸುವ ಹಕ್ಕು, ಶಿಕ್ಷಣದ ಹಕ್ಕು, ಉದ್ಯೋಗದ ಹಕ್ಕು ಮತ್ತು ಆಹಾರದ ಹಕ್ಕು ಅತಂತ್ರಗೊಂಡಿವೆ. ಹೆಚ್ಚುತ್ತಿರುವ ಬೆಲೆ ಏರಿಕೆ, ನಿರುದ್ಯೋಗ ಮತ್ತು ರೈತರ ಆತ್ಮಹತ್ಯೆಗಳಿಗೆ ಸರಕಾರ ಜಾಣ ಕುರುಡು ಪ್ರದರ್ಶಿಸುತ್ತಿದೆ. ಸರಕಾರ ಗಳು ಮಾನವ ಹಕ್ಕುಗಳನ್ನು ಮರೆತಿವೆ ಎಂದು ದೂರಿದರು.

ಮಹಿಳೆಯರ ಶೋಷಣೆಗಳು ಬೆಳಕಿಗೆ ಬಾರದ ಹಿನ್ನೆಲೆಯಲ್ಲಿ, ಮಹಿಳೆಯರ ಪರ ಎನ್ನಲಾಗುವ ಕಾನೂನುಗಳು ಪುಸ್ತಕಗಳಲ್ಲಿ ಮಾತ್ರ ಅಡಕಗೊಂಡಿವೆ. ಮಹಿಳೆಯರ ಮೇಲಿನ ದೌರ್ಜನ್ಯ ಗಳನ್ನು ಸರಕಾರಗಳು ಮುಚ್ಚಿ ಹಾಕಲು ಪ್ರಯತ್ನಿಸುತ್ತಿವೆ. ನ್ಯಾಯ ನಿಧಾನದಿಂದ ಮಹಿಳೆಯರು ಅನ್ಯಾಯಕ್ಕೊಳಗಾಗು ತ್ತಿರುವುದು ನಾಚಿಕೆಗೇಡು ಎಂದು ಕಿಡಿ ಕಾರಿದರು.

ಮಹಿಳೆಯರ ಮೇಲೆ ದೌರ್ಜನ್ಯ ವೆಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಸ್ಪಷ್ಟ ಆದೇಶ ನೀಡಬೇಕು. ಮಹಿಳೆಯರ ಪರ ಪರಿಣಾಮ ಕಾರಿಯಾದ ಕಾನೂನು ಗಳನ್ನು ಜಾರಿ ಗೊಳಿಸಬೇಕು ಎಂದು ಆಗ್ರಹಿಸಿದರು. 

ಸಂಘಟನೆಯ ಕಾರ್ಯದರ್ಶಿ ಜಿ. ಸರೋಜ,  ಜಿ.ಆರ್. ಮಲ್ಲಮ್ಮ, ತಟ್ನಮ್ಮ, ಎಚ್.ಬಸಮ್ಮ, ಪಿ.ಹನುಮವ್ವ ಮತ್ತು ಪಿ.ಹನುಮಕ್ಕ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.  ತಾಲ್ಲೂಕು ಸಮಿತಿ ಪದಾಧಿಕಾರಿಗಳು   ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.