ADVERTISEMENT

ನೌಕರರಿಗೆ ಬಡ್ತಿ ನೀಡಲು ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2012, 5:50 IST
Last Updated 22 ಆಗಸ್ಟ್ 2012, 5:50 IST

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ 10 ರಿಂದ 20 ವರ್ಷಗಳ ಕಾಲ ಬಿಲ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸು ತ್ತಿರುವ ನೌಕರರಿಗೆ ಬಡ್ತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಕುರಿತು ಸೋಮವಾರ ಸಚಿವರಿಗೆ ಮನವಿ ಸಲ್ಲಿಸಿದ ನಂತರ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಆರ್.ಎಸ್. ಬಸವರಾಜ್ ಸೇವಾ ನಿಯಮದಂತೆ ಕಾರ್ಯದರ್ಶಿ ಗ್ರೇಡ್- 2 ಅಥವಾ ಲೆಕ್ಕಸಹಾಯಕ ಎಂದು ಬಡ್ತಿ ನೀಡಲು ಆದೇಶವಿದ್ದರೂ ಈ ವರೆಗೂ ಕ್ರಮಕೈಗೊಂಡಿಲ್ಲ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಸರ್ಕಾರ ಕೂಡಲೆ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಿರುವುದಾಗಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಬಸವರಾಜ್,ಎಸ್. ಪರಮೇಶ, ಆರ್. ಬಸವನ ಗೌಡ, ಎಸ್.ರಾಜಶೇಖರಗೌಡ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.