ADVERTISEMENT

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2012, 6:15 IST
Last Updated 5 ಡಿಸೆಂಬರ್ 2012, 6:15 IST

ಬಳ್ಳಾರಿ: ವಿವಿಧ ಮೂಲ ಸೌಕರ್ಯ ಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಸ್ಥಳೀಯ ಹಿಂದುಳಿದ ವರ್ಗಗಳ (ಬಿಸಿಎಂ) ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸ್ಥಳೀಯ ಪಾರ್ವತಿ ನಗರದ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಹಲವಾರು ಕುಂದುಕೊರತೆಗಳಿದ್ದು, ಇದರಿಂದಾಗಿ ವಿದ್ಯಾರ್ಥಿನಿಯರು ದಿನನಿತ್ಯ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಕುರಿತು ವಿದ್ಯಾರ್ಥಿನಿಲಯ ಪಾಲಕರಿಗೆ (ವಾರ್ಡನ್) ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

ವಸತಿ ನಿಲಯದಲ್ಲಿ ಹಗಲು ಮತ್ತು ರಾತ್ರಿ ವೇಳೆಯಲ್ಲಿ ಕಾವಲುಗಾರರು ಇಲ್ಲದೇ ಇರುವುದರಿಂದ ವಿದ್ಯಾರ್ಥಿನಿ ಯರಿಗೆ ಸಮಸ್ಯೆ ಉಂಟಾಗಿದ್ದು, ವಿದ್ಯಾಭ್ಯಾಸ ಮಾಡಲು ತೊಂದರೆ ಯಾಗುತ್ತಿದೆ. ಈ ಕುರಿತು ಕೋಡಲೇ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಒತ್ತಾಯಿಸಿದೆ.

ವಿದ್ಯಾರ್ಥಿ ನಿಲಯದಲ್ಲಿ ಒಟ್ಟಾರೆ ಇರುವ ಕೊಠಡಿಗಳ ಸಂಖ್ಯೆ ಕೇವಲ ಹದಿನೈದು. ಆದರೆ ಈ ಕೊಠಡಿಗಳಲ್ಲಿ ನಾಲ್ಕು ನೂರಕ್ಕೂ ಹೆಚ್ಚು ವಿದ್ಯಾರ್ಥಿನಿ ಯರು ವಾಸಿಸುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದರು.

ಆವರಣದಲ್ಲಿ ಸೈಕಲ್ ಸ್ಟ್ಯಾಂಡ್‌ನ ವ್ಯವಸ್ಥೆ ಕಲ್ಪಿಸಬೇಕು, ಶುದ್ಧ ಕುಡಿ ಯುವ ನೀರಿನ ವ್ಯವಸ್ಥೆ, ಅಧಿಕ ಕೊಠಡಿ ಗಳ ನಿರ್ಮಾಣ ಮಾಡಬೇಕು,  ಹೆಚ್ಚುವರಿ ಶೌಚಾಲಯಗಳ ನಿರ್ಮಾಣ ಮಾಡಿಕೊಡಬೇಕು. ಹಾಗೆಯೇ ಕಾಯಂ ಅಡುಗೆ ಸಿಬ್ಬಂದಿ ನೇಮಕ ಹಾಗೂ ವಸತಿ ನಿಲಯಕ್ಕೆ ಕಾವಲುಗಾರರನ್ನು ನೇಮಕ ಮಾಡು ವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿ ಸುವಂತೆ ಅವರು ಒತ್ತಾಯಿದರು.

ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಅವರು ಮನವಿ ಸಲ್ಲಿಸಿದರು.
ಎಬಿವಿಪಿ ಕಾರ್ಯಕರ್ತ ರವಿಗೌಡ, ಮಹಾಂತೇಶ ನಾಯ್ಕ, ಮಂಜುನಾಥ್, ಪದ್ಮ, ಜ್ಯೋತಿ, ರಾಜೇಶ್ವರಿ ಸೇರಿದಂತೆ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.