ADVERTISEMENT

ಬೇಡ, ನಾಯಕರ ಶೌರ್ಯ: ಡಾ. ಮುರಿಗೆಪ್ಪ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2012, 5:00 IST
Last Updated 25 ಜನವರಿ 2012, 5:00 IST

ಹೊಸಪೇಟೆ: `ಪ್ರತಿಯೊಂದು ಸಮಾಜ ತನ್ನ ಇತಿಹಾಸ ಮತ್ತು ಸಂಸ್ಕೃತಿಗೆ ಧಕ್ಕೆಯಾಗದಂತೆ ಅದರ ಮೌಲ್ಯಗಳನ್ನು ಗಟ್ಟಿ ಗೊಳಿಸುವ ಕಾರ್ಯದಲ್ಲಿ ಕ್ರಿಯಾಶೀಲವಾಗಿ ಇರಬೇಕಾಗಿ ರುವುದು ಅನಿವಾರ‌್ಯ~ವಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಎ.ಮುರಿಗೆಪ್ಪ ಹೇಳಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಭುವನವಿಜಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಮಂಗಳವಾರ ಹಮ್ಮಿಕೊಂಡಿದ್ದ `ಕಮಲಾಪುರದ ಬೇಡ ನಾಯಕರ ಸಾಮಾಜಿಕ ಮತ್ತು ಸಾಂಸ್ಕೃತಿಕ ಬದಲಾವಣೆಗಳು~ ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡಿ ನಾವೆಲ್ಲರೂ ಅತ್ಯಂತ ಹೆಮ್ಮೆಯಿಂದ ಹೇಳಬೇಕಾದ ನಾಯಕ ಸಮುದಾಯ ಶೌರ್ಯ ಹಾಗೂ ಪರಾಕ್ರಮಗಳ ಮೂಲಕ ಇತಿಹಾಸದಲ್ಲಿ ತನ್ನ ಹಿರಿಮೆಯನ್ನು ಪ್ರದರ್ಶಿಸಿದ್ದು ಇಂತಹ ಇತಿಹಾಸ ಮರುಕಳಿಸಬೇಕಾಗಿದೆ ಎಂದರು.

ಇಂದು ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಗಳಿಗೆ ಕೇವಲ ಸರ್ಕಾರವನ್ನು ನಂಬಿ ಕುಳಿತುಕೊಳ್ಳದೆ ಸಮುದಾಯದ ಪರಿಸ್ಥಿತಿ ಅರಿತು ಅವುಗಳ ಪರಿಹಾರಕ್ಕೆ ಮಾರ್ಗೋಪಾಯ ಗಳನ್ನು ಕಂಡುಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ವಾಲ್ಮೀಕಿ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯ ಹರ್ತಿಕೋಟಿ ವೀರೇಂದ್ರಸಿಂಹ ಮಾತನಾಡಿ `ಸಮುದಾಯಕ್ಕೆ ಅನೇಕ ಅವಕಾಶಗಳಿದ್ದು ಆಂತರಿಕ ಕಲಹಗಳಿಂದ ಹೊರಬಂದು ಒಗ್ಗಟ್ಟಿನಿಂದ ಸಮಾಜದ ಸ್ಥಿತಿಗತಿಗಳನ್ನು ಅರಿತು ಭವಿಷ್ಯತ್ತಿನಲ್ಲಿ ಹೇಗಿರಬೇಕು? ಎಂಬುವುದನ್ನು ಚಿಂತಿಸುವ ಮೂಲಕ ಸಮುದಾಯದ ಹಿರಿಮೆಯನ್ನು ಎತ್ತಿಹಿಡಿಯಬೇಕು~ ಎಂದರು.

ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಜಂಬಯ್ಯ ನಾಯಕ್, ವಾಲ್ಮೀಕಿ ಜಾೃಗತ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಗುಜ್ಜಲ್ ನಾಗರಾಜ ಮಾತನಾಡಿ, ಸಮುದಾಯದ ಪ್ರಗತಿಗೆ ವಿಶ್ವವಿದ್ಯಾಲಯ ಯೋಜನೆ ರೂಪಿಸುವಂತೆ ಆಗ್ರಹಿಸಿದರು.

ಡಾ.ಎಚ್.ಡಿ.ಪ್ರಶಾಂತ ನಿರ್ವಹಿಸಿದ್ದ ಕಾರ್ಯಕ್ರಮದಲ್ಲಿ ಸಂಚಾಲಕ ಡಾ.ತಾರಿಹಳ್ಳಿ ಹನುಮಂತಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎರಡು ದಿನಗಳ ವಿಚಾರ ಸಂಕಿರಣದಲ್ಲಿ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಬದಲಾವಣೆಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.