ADVERTISEMENT

ಮಂಡ್ಯ, ಬೆಂಗಳೂರು ಚಾಂಪಿಯನ್ಸ್‌

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2013, 6:17 IST
Last Updated 27 ನವೆಂಬರ್ 2013, 6:17 IST
ಹೊಸಪೇಟೆಯಲ್ಲಿ ಮಂಗಳವಾರ ಪೈಕಾ ರಾಜ್ಯಮಟ್ಟದ ಗ್ರಾಮೀಣ ಕ್ರೀಡಾಕೂಟದ ಅಂಗವಾಗಿ ನಡೆದ ಬ್ಯಾಸ್ಕೆಟ್‌ಬಾಲ್‌ ಟೂರ್ನಿಯ ಬಾಲಕರ ವಿಭಾಗದ ಚಾಂಪಿಯನ್‌ ಆಗಿ ಹೊರಹೊಮ್ಮಿದ ಮಂಡ್ಯ ತಂಡ ಪ್ರಶಸ್ತಿಯೊಂದಿಗೆ ಸಂಭ್ರಮಿಸಿತು. ಉಪವಿಭಾಗಾಧಿಕಾರಿ ಪಿ.ಸುನೀಲಕುಮಾರ್‌ ಇತರರು ಚಿತ್ರದಲ್ಲಿದ್ದಾರೆ

ಹೊಸಪೇಟೆ: ಮಂಡ್ಯ ಮತ್ತು ಬೆಂಗಳೂರು ತಂಡಗಳು ರಾಜ್ಯಮಟ್ಟದ ಪೈಕಾ ಗ್ರಾಮೀಣ ಕ್ರೀಡಾಕೂಟದ ಅಂಗವಾಗಿ ಇಲ್ಲಿ ನಡೆದ ಎರಡು ದಿನಗಳ ಬ್ಯಾಸ್ಕೆಟ್‌ಬಾಲ್‌ ಟೂರ್ನಿಯಲ್ಲಿ ಕ್ರಮವಾಗಿ ಬಾಲಕ ಹಾಗೂ ಬಾಲಕಿಯರ ವಿಭಾಗದ ಚಾಂಪಿಯನ್‌ ಆಗಿ ಹೊರಹೊಮ್ಮಿದವು.

ಬಾಲಕರ ವಿಭಾಗದ ಫೈನಲ್‌ನಲ್ಲಿ ಮಂಡ್ಯ ತಂಡ 38–30 ಅಂಕಗಳಿಂದ ಬೆಂಗಳೂರಿನ ವಿದ್ಯಾನಗರ ಕ್ರೀಡಾಶಾಲೆ ತಂಡವನ್ನು ಮಣಿಸಿತು.ಬೆಳಗಾವಿ ತೃತೀಯ ಹಾಗೂ ಮೈಸೂರು ನಾಲ್ಕನೇ ಸ್ಥಾನ ಪಡೆದವು. 

ಬಾಲಕಿಯರ ವಿಭಾಗದ ಫೈನಲ್‌ನಲ್ಲಿ ಬೆಂಗಳೂರಿನ ವಿದ್ಯಾನಗರ ಕ್ರೀಡಾಶಾಲೆ ತಂಡ 21–07 ಅಂಕಗಳ               ಅಂತರದಿಂದ ಮಂಡ್ಯ ಬಾಲಕಿಯರ ತಂಡವನ್ನು ಮಣಿಸಿತು.

ಧಾರವಾಡ ತೃತೀಯ ಹಾಗೂ ಬೆಂಗಳೂರು ಗ್ರಾಮಾಂತರ ತಂಡ ನಾಲ್ಕನೇ ಸ್ಥಾನ ಪಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.