ADVERTISEMENT

ಮಹಿಳಾ ಪೊಲೀಸ್ ಠಾಣೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2012, 3:30 IST
Last Updated 20 ಮಾರ್ಚ್ 2012, 3:30 IST

ಬಳ್ಳಾರಿ: ನಗರದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಪೊಲೀಸ್ ಠಾಣೆ ಆರಂಭಿಸುವಂತೆ ಆಗ್ರಹಿಸಿ ಸಂಬೋಧ್ ಎಜ್ಯುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಮಹಿಳೆಯರ ಮೇಲೆ ದೌರ್ಜನ್ಯ ಸೇರಿದಂತೆ ಇತರ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ ಮತ್ತು ಮಾನಹಾನಿ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಮಹಿಳಾ ಅಧಿಕಾರಿಗಳೇ ಕಾರ್ಯ ನಿರ್ವಹಿಸುವ ಪ್ರತ್ಯೇಕ ಠಾಣೆಯನ್ನು ಆರಂಭಿಸುವುದರಿಂದ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾಧ್ಯವಾಗುತ್ತದೆ.
 
ಕೆಲವು ವಿಚಾರಗಳನ್ನು ಪುರುಷ ಪೊಲೀಸ್ ಅಧಿಕಾರಿಗಳ ಬಳಿ ಹೇಳಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪೊಲೀಸ್ ಠಾಣೆ ಆರಂಭಿಸಿ, ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮಾಜಿ ಮೇಯರ್ ಪಾರ್ವತಿ ಇಂದುಶೇಖರ್ ಪ್ರತಿಭಟನಾ ಮೆರವಣಿಗೆಯ ನೇತೃತ್ವವಹಿಸಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.