ಬಳ್ಳಾರಿ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಇದೇ 26ರಿಂದ 29ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕರಿಸಲಿದ್ದಾರೆ.
ಜೂನ್ 26ರಂದು ಹೊಸಪೇಟೆ, 27ರಂದು ಸಿರುಗುಪ್ಪ ಹಾಗೂ ಹೂವಿನಹಡಗಲಿ, 28ರಂದು ಸಂಡೂರು ಹಾಗೂ ಕೂಡ್ಲಿಗಿ, 29ರಂದು ಬಳ್ಳಾರಿ ಹಾಗೂ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಸಾರ್ವಜನಿಕ ಕುಂದುಕೊರತೆ ಇತ್ಯರ್ಥಪಡಿಸಲಿದ್ದಾರೆ.
ಆಯಾ ದಿನಾಂಕಗಳಂದು ಸಂಬಂಧಿಸಿದ ತಾಲ್ಲೂಕಿನ ಪ್ರವಾಸಿ ಮಂದಿರಗಳಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಅಹವಾಲು ಸ್ವೀಕರಿಸಿ, ಸ್ಥಳದಲ್ಲೇ ಪರಿಹರಿಸಲಿದ್ದಾರೆ.
ಬಳ್ಳಾರಿಯ ಲೋಕಾಯುಕ್ತ ಡಿವೈಎಸ್ಪಿ ಜೆ. ರಮೇಶ್ ನೇತೃತ್ವದಲ್ಲಿ ಸಿರುಗುಪ್ಪ, ಸಂಡೂರು, ಬಳ್ಳಾರಿ ತಾಲ್ಲೂಕು ಹಾಗೂ ಹೊಸಪೇಟೆಯ ಲೋಕಾಯುಕ್ತ ಉಪ ಅಧೀಕ್ಷಕ ಎಂ. ಪಾಷಾ ನೇತೃತ್ವದಲ್ಲಿ ಹೊಸಪೇಟೆ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ತಾಲ್ಲೂಕಿನ ಕುಂದುಕೊರತೆ ಅರ್ಜಿ ಸ್ವೀಕರಿಸಲಾಗುವುದು ಎಂದಿದ್ದಾರೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಜಿ.ಎಸ್. ಹೆಬ್ಬಾಳ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.