ADVERTISEMENT

ಶ್ರಮದಾನ: ಗಾಂಧಿ- ಶಾಸ್ತ್ರೀಜಿಗೆ ನಮನ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2011, 8:00 IST
Last Updated 3 ಅಕ್ಟೋಬರ್ 2011, 8:00 IST

ಕೊಟ್ಟೂರು: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಮಹಾತ್ಮಾ ಗಾಂಧೀಜಿಯವರ 142ನೇ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ 109ನೇ ಜಯಂತಿ ಅಂಗವಾಗಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪನ್ಯಾಸಕ ಡಾ. ಜಿ. ಸೋಮಶೇಖರ್, ಇಂದಿನ ಯುವ ಪೀಳಿಗೆ ದುಶ್ಚಟಗಳಿಂದ ದೂರವಾಗಿ ಸಮಾಜಮುಖಿ ವ್ಯಕ್ತಿತ್ವ ರೂಪಿಸಿ ಕೊಳ್ಳಬೇಕು ಎಂದು ಕರೆ ನೀಡಿದರು.
ಯುವ ಜನರು ಕ್ರಿಯಾಶೀಲರಾಗಿ ದೇಶದ ಅಭ್ಯುದೇಯಕ್ಕೆ ಸಮಾಜ ಸೇವೆ ಮಾಡುವ ಮೂಲಕ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಮಹಾತ್ಮಾ ಗಾಂಧೀಜಿ ಮತ್ತು ಲಾಲ್‌ಬಹದ್ದೂರ್ ಶಾಸ್ತ್ರಿಯವರ ಆದರ್ಶಗಳನ್ನು ಇಂದಿನ ಪೀಳಿಗೆ ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎನ್. ಎಸ್. ಎಸ್. ಘಟಕದ ಅಧಿಕಾರಿ ಜಿ. ಚಿತ್ತರಂಜನ್, ವಿದ್ಯಾರ್ಥಿಗಳು ಪ್ರಾಮಾಣಿಕತೆಯನ್ನು ಮೈಗೂಡಿಸಿ ಕೊಳ್ಳಬೇಕು. ತಪ್ಪಿದ್ದರೆ ಒಪ್ಪಿಕೊಳ್ಳವ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಪದವಿ ಪೂರ್ವ ಕಾಲೇಜಿನ ಆವರಣ ಮತ್ತು ಜೆಸಿಐ ಕಚೇರಿ ಆವರಣ ಮತ್ತು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣ ದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಜೆಸಿಐ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಜೆಸಿಐ ಅಧ್ಯಕ್ಷ ಯೋಗೀಶ್ವರ ದಿನ್ನೆ, ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಗುರುಬಸವರಾಜ್, ಡಾ, ಅರುಣ್ ಕುಮಾರ್, ಡಾ. ಸುಲೋಚನಾ, ಮುನೇಗೌಡ, ಜಿ. ಶಿವಕುಮಾರ್, ಸರ್ಪಭೂಷಣ, ನಾಗಸಂದ್ರಮೂರ್ತಿ, ವೀಣಾ ವಿವೇಕಾನಂದಗೌಡ, ಕ್ರಾಂತಿ ದಳದ ಶಿವಕುಮಾರ ಗೌಡ, ಹೆಚ್. ದುರುಗೇಶ, ಉಮಾಶಂಕರ್, ಜವಳಿ ಗುರುರಾಜೇಂದ್ರ, ಮಲ್ಲಿಕಾರ್ಜುನ ಡಂಬಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.