ADVERTISEMENT

ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2012, 4:45 IST
Last Updated 2 ಮಾರ್ಚ್ 2012, 4:45 IST

ಗಾಳೆಮ್ಮನಗುಡಿ (ಮರಿಯಮ್ಮನ ಹಳ್ಳಿ): ವಿದ್ಯಾರ್ಥಿಗಳು ಜೀವನದಲ್ಲಿ ಛಲ, ಗುರಿಯನ್ನು ಹೊಂದಬೇಕಾಗಿದ್ದು, ಆ ಮೂಲಕ ಅದನ್ನು ಸಾಧಿಸಲು ಕಠಿಣ ಪರಿಶ್ರಮ ಅಗತ್ಯವಾಗಿದೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಶಿವಮೂರ್ತಿ ಸಲಹೆ ನೀಡಿದರು.

ಇಲ್ಲಿಗೆ ಸಮೀಪದ ಗಾಳೆಮ್ಮನಗುಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸಂಜೆ ಹಮ್ಮಿ ಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಹಮ್ಮಿ ಕೊಂಡಿದ್ದು, ಮಕ್ಕಳು ಅದನ್ನು ಸದುಪ ಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಮುಂದೆ ಬರಬೇಕಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕ ಪೋಷಕ ರೊಂದಿಗೆ ಶಿಕ್ಷಕರು ಶ್ರಮಿಸುವುದರೊಂದಿಗೆ, ಮಕ್ಕಳನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಂತೆ ಸಲಹೆ ನೀಡಿದರು.

ಸಿಆರ್‌ಪಿಗಳಾದ ಕೆ.ನಾಗರಾಜ್, ಕೆ.ತಿಂದಪ್ಪ ಮಾತನಾಡಿದರು. ಪ್ರಾಸ್ತಾವಿಕವಾಗಿ ಶಿಕ್ಷಕಿ ಪಿ.ಶ್ವೇತಾ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಸಿ.ಎ.ನಾಗರಾಜ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕ ಎ.ಎಂ. ಬಸಯ್ಯ, ಮುಖ್ಯ ಶಿಕ್ಷಕ ಎಲ್.ಶಂಕರ ನಾಯ್ಕ,  ಎಸ್‌ಡಿಎಂಸಿ ಅಧ್ಯಕ್ಷ ಸಿ.ಎ. ನಾಗರಾಜ ಅವರನ್ನು ಸನ್ಮಾನಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯರಾದ ತಂಗರಾಜ, ಮಜ್ಗಿ ಶಿವಪ್ಪ, ಮುತ್ತಮ್ಮ ಹೊನ್ನೂರಪ್ಪ, ಗ್ರಾ.ಪಂ.ಮಾಜಿ ಅಧ್ಯಕ್ಷೆ ನಿಂಗಮ್ಮ, ಎಸ್‌ಡಿಎಂಸಿ ಉಪಾಧ್ಯಕ್ಷೆ ಗಂಗಮ್ಮ, ಗಾಳೆಪ್ಪ, ದೇವ್ಲಾನಾಯ್ಕ, ಅಪ್ಪಣ್ಣ, ಪಂಪಾಪತಿ, ವಿರುಪಾಕ್ಷಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯ ಬಿ.ರಾಮಜ್ಜ, ಎಎಸ್‌ಐ ವೈ.ಮಲ್ಲಪ್ಪ, ಹೊನ್ನೂರಪ್ಪ ಇತರರು ಉಪಸ್ಥಿತರಿದ್ದರು.

ಮಕ್ಕಳು ಪ್ರಾರ್ಥನೆ ಸಲ್ಲಿಸಿದರು. ಸಿ.ಡಿ.ತಿಪ್ಪೇಸ್ವಾಮಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಎಲ್. ಶಂಕರ ನಾಯ್ಕ ವಂದಿಸಿದರು. ನಂತರ ಮಕ್ಕಳಿನಿಂದ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಮಕ್ಕಳಿಂದ ನಿಸರ್ಗ ಮತ್ತು ಏಕಲವ್ಯ ನಾಟಕ ಪ್ರದರ್ಶನ ಜರುಗಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.