ADVERTISEMENT

ಸೇತುವೆ ಏರಿದ ಬಸ್: ಪ್ರಯಾಣಿಕರು ಅಪಾಯದಿಂದ ಪಾರು

​ಪ್ರಜಾವಾಣಿ ವಾರ್ತೆ
Published 2 ಮೇ 2012, 5:30 IST
Last Updated 2 ಮೇ 2012, 5:30 IST

ಸಿರುಗುಪ್ಪ: ರಾಜ್ಯ ರಸ್ತೆ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯ ಬದಿಯಲ್ಲಿನ ಕಿರು ಸೇತುವೆಯ ಮೇಲೇರಿದ ಘಟನೆ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರಿಗೆ ಮಾತ್ರ ಸಣ್ಣಪುಟ್ಟ ಗಾಯವಾಗಿವೆ, ಸುದೈವವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಬಳ್ಳಾರಿ ರಸ್ತೆಯ ಸಿದ್ದಪ್ಪ ನಗರದ ಬಳಿ ಇಂದು ಬೆಳಗಿನ ಜಾವ ಈ ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಸಿಂಧನೂರಿಗೆ ಹೊರಟಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಿರು ಸೇತುವೆ (ಡ್ರಾಪ್)ಯನ್ನು ಏರಿದೆ. ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ಗಾಯಾಳು ಯುವತಿ ಸಾವು
ಸಿರುಗುಪ್ಪ: ಮನೆಯಲ್ಲಿ ಒಲೆ ಹಚ್ಚುವಾಗ ಆಕಸ್ಮಿಕ ಬೆಂಕಿ ತಗುಲಿ ಸುಟ್ಟಗಾಯಗಳಾಗಿದ್ದ ಯುವತಿ ಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬಳ್ಳಾರಿಯ ವಿಮ್ಸನಲ್ಲಿ ಮೃತಪಟ್ಟಿದ್ದಾಳೆ.ತಾಲ್ಲೂಕಿನ ಗಡ್ಡೆ ವಿರೂಪಾಪುರ ಗ್ರಾಮದ ಲಿಂಗಮ್ಮ (16) ಮೃತಪಟ್ಟ ಯುವತಿ.

ಏಪ್ರಿಲ್ 26ರಂದು ತಮ್ಮ ಮನೆಯಲ್ಲಿ ಅಡುಗೆ ಮಾಡಲು ಒಲೆ ಹಚ್ಚುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ಹತ್ತಿಕೊಂಡ ಪರಿಣಾಮ ಶೇ 90ರಷ್ಟು ಸುಟ್ಟಗಾಯಗಳಾಗಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಲಿಂಗಮ್ಮ ಸಾವನ್ನಪ್ಪಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.