ADVERTISEMENT

ಹಂಪಿ: ಸಮೀಕ್ಷೆ ಕಾರ್ಯ ಪೂರ್ಣ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2011, 7:05 IST
Last Updated 11 ಸೆಪ್ಟೆಂಬರ್ 2011, 7:05 IST

ಹೊಸಪೇಟೆ: ಹೈಕೋರ್ಟ್ ನಿರ್ದೇಶನ ದಂತೆ ಐತಿಹಾಸಿಕ ಹಂಪಿಯ ವಿರೂಪಾಕ್ಷೇಶ್ವರ ದೇವಾಲಯದ ಸುತ್ತಲೂ ನಿರ್ಮಾಣವಾಗಿರುವ ಅಕ್ರಮ ಕಟ್ಟಡಗಳ ಸಮೀಕ್ಷಾ ಕಾರ್ಯವನ್ನು ಭಾರತೀಯ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳು ಶನಿವಾರ ಪೂರ್ಣಗೊಳಿಸಿದ್ದಾರೆ.

ಹಂಪಿಯಲ್ಲಿ ವಿರೂಪಾಕ್ಷೇಶ್ವರ ದೇವಾಲಯದ ಸುತ್ತಲೂ ನಿರ್ಮಾಣ ವಾಗಿರುವ ಅನಧಿಕೃತ ಕಟ್ಟಡಗಳ ಸರ್ವೇ ಮಾಡಿ ವರದಿ ನೀಡುವಂತೆ ನ್ಯಾಯಾಲಯ ತಿಳಿಸಿದ ಕಾರಣ ಸಮೀಕ್ಷೆ ನಡೆಸಿದ ಅಧಿಕಾರಿಗಳು ಅಧೀಕೃತ ಮಾಹಿತಿಯನ್ನು ಸೋಮವಾರ  ನ್ಯಾಯಾಲಯಕ್ಕೆ ಸಲ್ಲಿಸುತ್ತಾರೆ.

ಕಳೆದ ನಾಲ್ಕು ದಿನಗಳಿಂದ ಮಾಡಿದ ಸರ್ವೇ ಶನಿವಾರ ಮಧ್ಯಾಹ್ನದ ವೇಳೆಗೆ ಪೂರ್ಣಗೊಂಡಿದೆ. ಮಾಹಿತಿಯನ್ನು ಬಹಿರಂಗಗೊಳಿಸದ ಭಾರತೀಯ ಸರ್ವೇಕ್ಷಣಾ ಇಲಾಖೆಯ ಅಧಿಕಾರಿ  ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ  ತಿಳಿಸಿದರು.

ಭಾರತೀಯ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳು,  ಹಂಪಿ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಮತ್ತು  ಹಂಪಿ ಗ್ರಾಮ ಪಂಚಾಯ್ತಿ ಸಿಬ್ಬಂದಿ ಸರ್ವೇ ಕಾರ್ಯ ದಲ್ಲಿ  ಪಾಲ್ಗೊಂಡಿದ್ದರು.

ವಿರೂಪಾಕ್ಷ ದೇವಸ್ಥಾನದ ಸುತ್ತಮುತ್ತ ಒಟ್ಟು 334 ಅನಧಿಕೃತ ಕಟ್ಟಡಗಳನ್ನು ಗುರುತಿಸಲಾಗಿದೆ ಎಂದು ಹಂಪಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕರೀಗೌಡ ಅವರು `ಪ್ರಜಾವಾಣಿ~ಗೆ ತಿಳಿಸಿದರು.

ಭಾರತೀಯ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ವಿವರ ನೀಡಲು ನಿರಾಕರಿಸಿದ್ದು, ಹೈಕೋರ್ಟ್‌ಗೆ ನೇರವಾಗಿ ಮಾಹಿತಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.