ADVERTISEMENT

ಬಳ್ಳಾರಿ: 13 ಮರಳು ಬಂಡಿಗಳ ವಶ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2026, 2:31 IST
Last Updated 6 ಫೆಬ್ರುವರಿ 2026, 2:31 IST

ಬಳ್ಳಾರಿ: ಹಗರಿ–ವೇದಾವತಿ ನದಿಯಿಂದ ಅಕ್ರಮವಾಗಿ ಮರಳು ಹೊತ್ತು ತರುತ್ತಿದ್ದ ಎತ್ತಿನ ಬಂಡಿಗಳನ್ನು ವಶಪಡಿಸಿಕೊಂಡಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಅವುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. 

ಮರಳು ಹೊತ್ತು ತರುತ್ತಿದ್ದಾಗ ರೂಪನಗುಡಿ ರಸ್ತೆಯಲ್ಲಿ ಬಂಡಿಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT