ಕುರುಗೊಡು: ಸಿಡಿಲು ಬಡಿದು 14 ಕುರಿ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ಚಾನಾಳು ಗ್ರಾಮದಲ್ಲಿ ಮಂಗಳವಾರ ರಾತ್ರಿ ಜರುಗಿದೆ.
ಚಾನಾಳು ಗ್ರಾಮದ ಕುರೇರು ಹನುಮೇಶ ಎನ್ನುವವರ ಮನೆಯ ಮುಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕುರಿಗಳು ಮೃತಪಟ್ಟಿದ್ದು, ಕೊಟ್ಟಿಗೆಯಲ್ಲಿ ಸಂಗ್ರಹಿಸಿದ್ದ ದವಸ, ಧಾನ್ಯಗಳೂ ನಷ್ಟವಾಗಿವೆ.
ಮಂಗಳವಾರ ತಡರಾತ್ರಿ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ.
ಪಶುವೈದ್ಯ ಮಂಜುನಾಥ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ರೆಡ್ಡಿ, ಎಎಸ್‍ಐ ಅಜೀಮ್ ಮತ್ತು ಗ್ರಾಮಲೆಕ್ಕಾಧಿಕಾರಿ ಗಂಗಾಧರ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು.
ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.