ADVERTISEMENT

ಸಂಡೂರು | ಅಕ್ರಮವಾಗಿ ಸಾಗಿಸುತ್ತಿದ್ದ 17 ಕ್ವಿಂಟಾಲ್ ಪಡಿತರ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 15:49 IST
Last Updated 9 ಸೆಪ್ಟೆಂಬರ್ 2024, 15:49 IST
ಅಕ್ಕಿ
ಅಕ್ಕಿ   

ಸಂಡೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಹಾಗೂ ಸರ್ಕಾರದಿಂದ ವಿವಿಧ ಯೋಜನೆಯಲ್ಲಿ ಬಿಡುಗಡೆ ಮಾಡಿರುವ 17 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಆಹಾರ ಇಲಾಖೆ‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ಮೋತಲಕುಂಟ ಗ್ರಾಮದ ಗೋವಿಂದ ಎಂಬಾತ ಬೊಲೆರೋ ವಾಹನದಲ್ಲಿ ಸಂಡೂರು ಸಮೀಪದ ಕೃಷ್ಣಾನಗರದಿಂದ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಅಧಿಕೃತ ಪರವಾನಗಿ ಇಲ್ಲದೆ ಕಾಳಸಂತೆಯಲ್ಲಿ ಮಾರಾಟ ಮಾಡಲು ತೆರಳುತ್ತಿದ್ದಾಗ ಆಹಾರ‌ ನಿರೀಕ್ಷಕ‌ ಶ್ರೀನಿವಾಸ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಂಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT