ADVERTISEMENT

ಕುರುಗೋಡು: ದೊಡ್ಡಬಸವೇಶ್ವರ ದೇವಸ್ಥಾನದ ಹುಂಡಿಯಲ್ಲಿ ₹19.18 ಲಕ್ಷ ಹಣ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2025, 6:29 IST
Last Updated 3 ಆಗಸ್ಟ್ 2025, 6:29 IST
ಕುರುಗೋಡಿನ ದೊಡ್ಡಬಸವೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಮಂಗಳವಾರ ಜರುಗಿತು
ಕುರುಗೋಡಿನ ದೊಡ್ಡಬಸವೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಮಂಗಳವಾರ ಜರುಗಿತು   

ಕುರುಗೋಡು: ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ಮಂಗಳವಾರ ಪೂರ್ಣಗೊಂಡಿದ್ದು, ₹19.18 ಲಕ್ಷ ಹಣ ಸಂಗ್ರಹವಾಗಿದೆ.

ಮಾರ್ಚ್ 12ರಂದು ಹುಂಡಿ ಸ್ಥಾಪಿಸಲಾಗಿತ್ತು. ಮೂರು ತಿಂಗಳ ನಂತರ ಜೂಲೈ 22 ರಂದು ಎಣಿಕೆಮಾಡಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಮಾಹಿತಿ ನೀಡಿದರು.

ಸಂಗ್ರಹವಾದ ಹಣವನ್ನು ಧಾರ್ಮಿಕ ಧತ್ತಿ ಇಲಾಖೆ ಮಾರ್ಗದರ್ಶನದಲ್ಲಿ ಭಕ್ತರಿಗೆ ಸೌಲಭ್ಯ ಕಲ್ಪಿಸಲು ವಿನಿಯೋಜಿಸಲಾಗುವುದು ಎಂದು ತಿಳಿಸಿದರು.

ADVERTISEMENT

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಾನಾಳು ಆನಂದ, ಗಿರೀಶ್, ಸಿದ್ದನಗೌಡ, ಕಗ್ಗಲ್ ಬಸವರಾಜ, ಚಾನಾಳ್ ಪಲ್ಲವಿ ವಿಜಯಕುಮಾರ್, ಪಿಕೆಜಿಬಿ, ಪೊಲೀಸ್ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.