ತೆಕ್ಕಲಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ಅಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ವಶ ಪಡಿಸಿಕೊಂಡಿದ್ದಾರೆ
ತೆಕ್ಕಲಕೋಟೆ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಆಹಾರ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಆಹಾರ ನಿರೀಕ್ಷಕ ಮಹಾರುದ್ರಗೌಡ ನೇತೃತ್ವದ ತಂಡ ದಾಳಿ ನಡೆಸಿ ₹4.87 ಲಕ್ಷ ಮೌಲ್ಯದ 400 ಮೂಟೆಗಳಲ್ಲಿ ಸಂಗ್ರಹಿಸಿದ್ದ ಒಟ್ಟು 211.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದೆ. ಮೂರು ವಾಹನಗಳಲ್ಲಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.