ADVERTISEMENT

ಕಂಪ್ಲಿ: ನಾಲ್ಕು ಬಾಲ್ಯ ವಿವಾಹಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 22 ಮೇ 2021, 3:44 IST
Last Updated 22 ಮೇ 2021, 3:44 IST

ಕಂಪ್ಲಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಗ್ರಾಮವೊಂದರಲ್ಲಿ ನಾಲ್ಕು ಬಾಲ್ಯವಿವಾಹಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ಮಕ್ಕಳ ಸಹಾಯವಾಣಿ:1098ಕ್ಕೆ ಶುಕ್ರವಾರ ದೂರು ಬಂದ ಹಿನ್ನೆಲೆಯಲ್ಲಿ ಬಾಲ್ಯವಿವಾಹ ನಿಷೇಧ ತಂಡದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಿಚಾರಿಸಿ ವಿವಾಹ ತಡೆದಿದ್ದಾರೆ.

ತಹಶೀಲ್ದಾರ್ ಮಾರ್ಗದರ್ಶನದಲ್ಲಿ ಭೇಟಿ ನೀಡಿದ್ದ ಅಧಿಕಾರಿಗಳು ಪಟ್ಟಣದಲ್ಲಿ ಎರಡು, ತಾಲ್ಲೂಕಿನ ಗ್ರಾಮವೊಂದರಲ್ಲಿ ಎರಡು ಬಾಲ್ಯವಿವಾಹ ಮೇ. 23ರಂದು ನಡೆಯುತ್ತಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ನಂತರ ಸಂಬಂಧಿಸಿದ ಪಾಲಕ, ಪೋಷಕರಿಗೆ ಬಾಲ್ಯವಿವಾಹ ಕುರಿತು ಜಾಗೃತಿ ಮೂಡಿಸಿ ಮುಚ್ಚಳಿಕೆ ಬರೆಯಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದರು.

ಹೊಸಪೇಟೆ ಶಿಶು ಅಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕಿ ರೇಣುಕಾ, ಕಂಪ್ಲಿ ಪೋಲಿಸ್ ಠಾಣೆ ಎಎಸ್‍ಐ ತ್ಯಾಗರಾಜ್. ಕಾನ್‌ಸ್ಟೆಬಲ್ ಕೊಟ್ರೇಶ್, ಕುಡುತಿನಿ ಠಾಣೆ ಕಾನ್‌ಸ್ಟೆಬಲ್‌ ಶಿವಪುತ್ರಪ್ಪ, ಮಕ್ಕಳ ಸಹಾಯವಾಣಿ ಸಂಯೋಜಕರಾದ ನೇತ್ರಾ, ದೇವಪುತ್ರ, ಗ್ರಾಮ ಲೆಕ್ಕಾಧಿಕಾರಿ ಆತೀಫ್, ಗ್ರಾ.ಪಂ ಅಧ್ಯಕ್ಷೆ ಚನ್ನದಾಸರ ಚನ್ನಮ್ಮ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.