ADVERTISEMENT

‘ದಣಿವರಿಯದೇ ದುಡಿದ ಚಂದ್ರಶೇಖರ ಶ್ರೀ’

ಪುರದಲ್ಲಿ ಸಿದ್ಧವೀರ ಶಿವಾಚಾರ್ಯರ 41ನೇ ಸಂಸ್ಮರಣೋತ್ಸವ, ಸಾಮೂಹಿಕ ವಿವಾಹ

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 10:50 IST
Last Updated 26 ಜನವರಿ 2018, 10:50 IST
ಸಿದ್ಧವೀರ ಶಿವಾಚಾರ್ಯರ 41ನೇ ಸಂಸ್ಮರಣೋತ್ಸವ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಉದ್ಘಾಟಿಸಿದರು
ಸಿದ್ಧವೀರ ಶಿವಾಚಾರ್ಯರ 41ನೇ ಸಂಸ್ಮರಣೋತ್ಸವ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಉದ್ಘಾಟಿಸಿದರು   

ಹೂವಿನಹಡಗಲಿ: ‘ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದ ಪ್ರಗತಿಗಾಗಿ ದಣಿವರಿಯದೇ ದುಡಿದ ಲಿಂಗೈಕ್ಯ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಸಮಾಜದ ಉನ್ನತಿಗೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಶ್ರೀಶೈಲ ಪೀಠದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಪುರ ಗ್ರಾಮದಲ್ಲಿ ಬುಧವಾರ ವಿಶ್ವಾರಾಧ್ಯರ ರಥೋತ್ಸವ, ಸಿದ್ಧವೀರೇಶ ಶಿವಾಚಾರ್ಯರ 41ನೇ ಸಂಸ್ಮರಣೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಮಾತನಾಡಿ, ‘ಸಮಾಜಮುಖಿ ಕಾರ್ಯಕ್ರಮ ಸಂಘಟಿಸುವಲ್ಲಿ ಶ್ರೀಮಠವು ಮುಂಚೂಣಿಯಲ್ಲಿದೆ’ ಎಂದರು.

ADVERTISEMENT

ಕಾಶಿ ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿ ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಮುಂಡರಗಿಯ ಅನ್ನದಾನೀಶ್ವರ ಸ್ವಾಮೀಜಿ, ಹರಪನಹಳ್ಳಿ ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ, ಕೊಟ್ಟೂರು ಚಾನುಕೋಟಿ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ನಾಗತಿ ಬಸಾಪುರದ ಗಿರಿರಾಜ ಹಾಲ ಸ್ವಾಮೀಜಿ, ಗವಿಮಠದ ಡಾ.ಹಿರಿಶಾಂತವೀರ ಶ್ರೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.