ADVERTISEMENT

ಟಿಇಟಿ ಪರೀಕ್ಷೆ ಬರೆದ 7243 ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2022, 16:07 IST
Last Updated 6 ನವೆಂಬರ್ 2022, 16:07 IST
ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಟಿಇಟಿ ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳು ಗೋಡೆ ಮೇಲೆ ಅಂಟಿಸಿದ್ದ ಕೊಠಡಿಗಳ ವಿವರ ನೋಡಿದರು–ಪ್ರಜಾವಾಣಿ ಚಿತ್ರ
ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಟಿಇಟಿ ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳು ಗೋಡೆ ಮೇಲೆ ಅಂಟಿಸಿದ್ದ ಕೊಠಡಿಗಳ ವಿವರ ನೋಡಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ (ವಿಜಯನಗರ): ನಗರದ 18 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಸುಗಮವಾಗಿ ನಡೆಯಿತು.

ಬೆಳಿಗ್ಗೆ ನಡೆದ ಮೊದಲ ಪತ್ರಿಕೆಯ ಪರೀಕ್ಷೆಗೆ ಒಟ್ಟು 3,380 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಸಿದ್ದರು. ಇದರಲ್ಲಿ 3,059 ವಿದ್ಯಾರ್ಥಿಗಳು ಹಾಜರಾಗಿದ್ದರು. 321 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಇನ್ನು, ಮಧ್ಯಾಹ್ನ 2ರಿಂದ ನಡೆದ ಎರಡನೇ ಪತ್ರಿಕೆಗೆ 4,485 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಸಿದ್ದರು. ಇದರಲ್ಲಿ 4,184 ವಿದ್ಯಾರ್ಥಿಗಳು ಹಾಜರಾಗಿದ್ದರು. 301 ವಿದ್ಯಾರ್ಥಿಗಳು ಗೈರಾಗಿದ್ದರು.

ಎಲ್ಲ ಪರೀಕ್ಷಾ ಕೇಂದ್ರಗಳ ಬಳಿ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು. ಯಾವುದೇ ರೀತಿಯ ಗೊಂದಲಗಳಿಲ್ಲದೆ ಪರೀಕ್ಷೆಗಳು ನಡೆದಿವೆ ಎಂದು ಡಿಡಿಪಿಐ ಜಿ. ಕೊಟ್ರೇಶ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.