ADVERTISEMENT

ಬಾಲಕಿ ಮೇಲೆ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2019, 14:02 IST
Last Updated 3 ಏಪ್ರಿಲ್ 2019, 14:02 IST
   

ಹೊಸಪೇಟೆ: ಎಂಟು ವರ್ಷದ ಬಾಲಕಿ ಮೇಲೆ ಕುರಿಗಾಹಿ ಅತ್ಯಾಚಾರ ನಡೆಸಿದ್ದಾನೆ.

‘ಮಂಗಳವಾರ ರಾತ್ರಿ 8.30ರ ಸುಮಾರಿಗೆ ಬಾಲಕಿ ಮನೆ ಎದುರು ಆಟವಾಡುತ್ತಿದ್ದಳು. ಈ ವೇಳೆ ಕುರಿಗಾಹಿ ಮಾರೇಶ್‌, ಬಾಲಕಿಯನ್ನು ಬೇರೆಡೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಾಲಕಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ. ಬಾಲಕಿಯ ಪೋಷಕರು ನೀಡಿರುವ ದೂರಿನ ಮೇರೆಗೆ ಮಾರೇಶ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪರಾರಿಯಾಗಿರುವ ಮಾರೇಶ್‌ನಿಗಾಗಿ ಹುಡುಕಾಟ ಮುಂದುವರಿದಿದೆ’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.