ADVERTISEMENT

ಬಳ್ಳಾರಿಯಲ್ಲಿ ಒಂದೇ ದಿನ 840 ಜನರಿಗೆ ಕೋವಿಡ್‌-19 ದೃಢ

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 15:52 IST
Last Updated 27 ಜುಲೈ 2020, 15:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೊಸಪೇಟೆ: ಬಳ್ಳಾರಿ ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ 840 ಜನಕ್ಕೆ ಕೋವಿಡ್‌–19 ದೃಢಪಟ್ಟಿದ್ದು, ಏಳು ಜನ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಂದೇ ದಿನ ದಾಖಲಾದ ಅತ್ಯಧಿಕ ಪ್ರಕರಣಗಳಿವು.

ಭಾನುವಾರ 579 ಜನರಿಗೆ ಸೋಂಕಿರುವುದು ದೃಢಪಟ್ಟಿತ್ತು. ಸೋಮವಾರ ಅದಕ್ಕಿಂತ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ.
‘ಸೋಮವಾರ 48 ಜನ ಗುಣಮುಖರಾಗಿ ಮನೆ ಸೇರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 4,886 ಸೋಂಕಿತರಿದ್ದು, 3,134 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ಒಟ್ಟು 1,670 ಜನ ಗುಣಮುಖರಾಗಿದ್ದಾರೆ. 80 ಮಂದಿ ಮೃತಪಟ್ಟಿದ್ದಾರೆ’ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT