
ಪ್ರಜಾವಾಣಿ ವಾರ್ತೆಮರಿಯಮ್ಮನಹಳ್ಳಿ: ಸಮೀಪದ ತಿಮ್ಮಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-50ರ ಬದಿ ಶುಕ್ರವಾರ ತಡರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತಾಳೇಬಸಾಪುರ ತಾಂಡದ ಸಿ.ಶಂಕರ್ ನಾಯ್ಕ(42) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಂಕರ್ ನಾಯ್ಕ ಅವರು ತಡರಾತ್ರಿ ಬೈಕ್ ಮೇಲೆ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.