ತೋರಣಗಲ್ಲು: ಹೋಬಳಿಯ ವಡ್ಡು ಗ್ರಾಮದ ಬಳಿ ಸೋಮವಾರ ರಾತ್ರಿ ಬೈಕ್ ಮತ್ತು ಬುಲೆರೊ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಡ್ಡು ಗ್ರಾಮದ ನಿವಾಸಿ ಅನುಪಮ ಸುಹಾಸ್ ರೆಡ್ಡಿ (22) ಮೃತರು.
ಮೃತರ ಸಂಬಂಧಿ ನೀಡಿದ ದೂರು ಆಧರಿಸಿ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಿಸಲಾಗಿದ್ದು, ಬುಲೆರೊ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.