
ಪ್ರಜಾವಾಣಿ ವಾರ್ತೆ
ಸಿರುಗುಪ್ಪ: ತಾಲ್ಲೂಕಿನ ಬಂಡ್ರಾಳು ಗ್ರಾಮದ ಯುವಕ ಮಲ್ಲಿಕಾರ್ಜುನ (19) ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಗ್ರಾಮದ ಬಣಜಿಗರ ಶಿವಮ್ಮ ಅವರ ಪುತ್ರ ಮಲ್ಲಿಕಾರ್ಜುನ ಗುರುವಾರ ಹತ್ತಿ ಬಿಡಿಸಲು ಹೋಗಿ ಸಂಜೆ ವಾಪಸ್ಸಾಗುತ್ತಿದ್ದಾಗ ಗ್ರಾಮದ ಜೋಳದ ಹೊಲದ ಬಳಿ ಬಹಿರ್ದೆಸೆಗೆ ಹೋಗಿ ಕೆರೆಯ ಬಳಿ ತೆರಳಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.
ಶುಕ್ರವಾರ ಅಗ್ನಿಶಾಮಕ ದಳ ಹಾಗೂ ನುರಿತ ಈಜುಗಾರರು ಕಾರ್ಯಾಚರಣೆ ನಡೆಸಿ ಮೃತ ದೇಹ ಹೊರ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.