
ಕಂಪ್ಲಿ: ತಾಲ್ಲೂಕಿನ ನೆಲ್ಲೂಡಿ ಕೊಟ್ಟಾಲು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಮತ್ತು ಆರು ಭತ್ತದ ಹುಲ್ಲಿನ ಬಣವೆಗಳು ಸುಟ್ಟ ಭಸ್ಮವಾದ ಘಟನೆ ಭಾನುವಾರ ನಡೆದಿದೆ.
ಗುರಮ್ಮ ಅವರ ಗುಡಿಸಲು ಮತ್ತು ದಿನಸಿ ಸಾಮಗ್ರಿಗಳು, ರೈತರಾದ ಮಹೇಶ, ರಂಗ, ಚೌಡಪ್ಪ ಅವರಿಗೆ ಸೇರಿದ ತಲಾ ಎರಡು ಬಣವೆಗಳು ಸುಟ್ಟಿವೆ. ಕುಡುತಿನಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.
ಶಾಸಕ ಜೆ.ಎನ್. ಗಣೇಶ್ ಅವರು ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬಳಿಕ ದೂರವಾಣಿ ಮೂಲಕ ಅಧಿಕಾರಿಗಳೊಂದಿಗೆ ಮಾತನಾಡಿ ತ್ವರಿತವಾಗಿ ಪರಿಹಾರದ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಗ್ರಾಮ ಆಡಳಿತ ಅಧಿಕಾರಿ ಚನ್ನಕೇಶವ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.