ADVERTISEMENT

ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 12:40 IST
Last Updated 28 ಮಾರ್ಚ್ 2023, 12:40 IST
ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಿಸಲಾಯಿತು
ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಅಗ್ನಿಬನ್ನಿರಾಯ ಸ್ವಾಮಿ ಜಯಂತಿ ಆಚರಿಸಲಾಯಿತು   

ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಪ್ರತ್ಯೇಕವಾಗಿ ಅಗ್ನಿ ಬನ್ನಿರಾಯ ಸ್ವಾಮಿ ಜಯಂತಿ ಮಂಗಳವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಿರುಳ ಸಮುದಾಯದ ಸಾಂಸ್ಕೃತಿಕ ವೀರ ಅಗ್ನಿಬನ್ನಿರಾಯ ಅವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ. ಅವರು ಪೂಜೆ ಸಲ್ಲಿಸಿ ಪುಷ್ಪ ಗೌರವ ಸಲ್ಲಿಸಿದರು. ತಹಶೀಲ್ದಾರ್‌ ಕಾರ್ತಿಕ್, ಪ್ರತಿಭಾ ಇತರರಿದ್ದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಅವರು ಅಗ್ನಿಬನ್ನಿರಾಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕಂದಾಯ ಇಲಾಖೆಯ ಜಿ.ಮಲ್ಲಿಕಾರ್ಜುನ ಗೌಡ ಸೇರಿದಂತೆ ಇತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.