
ಕೃಷಿ
ಹೂವಿನಹಡಗಲಿ: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 17ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ರೈತರಿಗೆ ‘ಕೃಷಿ ರತ್ನ’ ಪ್ರಶಸ್ತಿ ನೀಡಲಾಗುತ್ತದೆ. ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ನ.22 ರಂದು ವಿ.ವಿ. ಆವರಣದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸಾಧಕ ರೈತರು ಸೂಕ್ತ ದಾಖಲೆಗಳೊಂದಿಗೆ ಕೃಷಿ ವಿಜ್ಞಾನ ಕೇಂದ್ರ, ವಿಸ್ತರಣಾ ಕೇಂದ್ರದಿಂದ ಅರ್ಜಿ ನಮೂನೆಯನ್ನು ಪಡೆದು ಇಲ್ಲವೇ ಕೃಷಿ ವಿವಿಯ ವೆಬ್ ಸೈಟ್ https://uasraichur.karnataka.gov.in ನಲ್ಲಿ ಅರ್ಜಿ ನಮೂನೆ ಪಡೆದು ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರಗಳ ಮುಖ್ಯಸ್ಥರಿಗೆ ನ.10ರೊಳಗೆ ಸಲ್ಲಿಸಬೇಕು. ಮಾಹಿತಿಗಾಗಿ 9480696336 ಸಂಪರ್ಕಿಸುವಂತೆ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮಂಜುನಾಥ ಭಾನುವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.