ADVERTISEMENT

ಕೃಷಿ ಸಚಿವ ಚೆಲುವರಾಯಸ್ವಾಮಿ ನಾಳೆ ಬಳ್ಳಾರಿಗೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2025, 5:25 IST
Last Updated 7 ನವೆಂಬರ್ 2025, 5:25 IST
<div class="paragraphs"><p>ಚೆಲುವರಾಯಸ್ವಾಮಿ</p></div>

ಚೆಲುವರಾಯಸ್ವಾಮಿ

   

ಬಳ್ಳಾರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಬಳ್ಳಾರಿಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ 10 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟ್ರಿಪ್‌ಗೆ ಬಂದು ಇಳಿಯುವರು.

ADVERTISEMENT

ಕೃಷಿ ಇಲಾಖೆ ವತಿಯಿಂದ ಬಳ್ಳಾರಿ ನಗರದ ಹಳೆಯ ತಾಲ್ಲೂಕು ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕೃಷಿಕ ಸಮಾಜ ಕಟ್ಟಡದ ಉದ್ಘಾಟನೆಯನ್ನು ಬೆಳಿಗ್ಗೆ 11 ಗಂಟೆಗೆ ನೆರವೇರಿಸುವರು. ಮಧ್ಯಾಹ್ನ 12 ಗಂಟೆಗೆ ಬಳ್ಳಾರಿಯಿಂದ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟ್ರಿಪ್‌ಗೆ ಆಗಮಿಸಿ, ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.