ADVERTISEMENT

ಕೃಷಿ ತರಬೇತಿ ಕೇಂದ್ರ: ಸ್ಥಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 7:21 IST
Last Updated 30 ಆಗಸ್ಟ್ 2025, 7:21 IST
ಕೂಡ್ಲಿಗಿ ತಾಲ್ಲೂಕಿನ ಗುಂಡಿನಹೊಳೆಯಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸ್ಥಾಪನೆ ಮಾಡುವ ನಿಮಿತ್ತ ಶುಕ್ರವಾರ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು
ಕೂಡ್ಲಿಗಿ ತಾಲ್ಲೂಕಿನ ಗುಂಡಿನಹೊಳೆಯಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸ್ಥಾಪನೆ ಮಾಡುವ ನಿಮಿತ್ತ ಶುಕ್ರವಾರ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು   

ಕೂಡ್ಲಿಗಿ: ತಾಲ್ಲೂಕಿನ ಗುಂಡಿನ ಹೊಳೆಯ ಬೀಜೋತ್ಪಾದನೆ ಕೇಂದ್ರದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ತಿಳಿಸಿದರು.

ಶುಕ್ರವಾರ ಗುಂಡಿನಹೊಳೆಯಲ್ಲಿನ ಕೇಂದ್ರ ಸ್ಥಾಪನೆ ಮಾಡುವ ಕುರಿತು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಗೊಂದು ಕೃಷಿ ತರಬೇತಿ ಕೇಂದ್ರ ಇರಬೇಕಾಗಿದ್ದು, ನೂತನ ವಿಜಯನಗರ ಜಿಲ್ಲೆಯ ತರಬೇತಿ ಕೇಂದ್ರ ಕೂಡ್ಲಿಗಿಗೆ ಮಂಜೂರಾಗಿದೆ. ಅದನ್ನು ಇಲ್ಲಿನ ಬೀಜೋತ್ಪಾದನಾ ಕೇಂದ್ರದಲ್ಲಿ ಸ್ಥಾಪನೆ ಮಾಡಲು ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಸರ್ಕಾರದಿಂದ ₹ 4.50 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಬಿಜೋತ್ಪಾದನ ಕೇಂದ್ರದಲ್ಲಿ ಒಂದು ಎಕರೆ ಜಾಗ ಗುರುತಿಸಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡದ ನೀಲನಕ್ಷೆಯೂ ಸಿದ್ಧವಾಗಿದೆ. ಅದರಲ್ಲಿ ಕೆಲ ಮಾರ್ಪಡುಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭ ಮಾಡಲಾಗುವುದು. ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ತರಬೇತಿ ಕೇಂದ್ರ ಒಂದೆ ಕಡೆ ಇರುವುದರಿಂದ ಜಿಲ್ಲೆಯ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ತಹಶೀಲ್ದಾರ್ ವಿ.ಕೆ. ನೇತ್ರಾವತಿ, ಕೃಷಿ ಸಹಾಯಕ ನಿರ್ದೇಶಕ ತೇಜವರ್ಧನ್, ಎಂಜನಿಯರ್ ಹಿತೇಶ್ವರ ಯಾದವ್, ಕೃಷಿ ಅಧಿಕಾರಿ ಚಂದ್ರಶೇಖರ್, ಕಂದಾಯ ನಿರೀಕ್ಷಕ ಪ್ರಭು ತಳವಾರ, ಮುಖಂಡ ರಮೇಶ್ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.