ಬಳ್ಳಾರಿ: ‘ವಾಲ್ಮೀಕಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಬಳಕೆಯಾಗಿದ್ದು, ಚುನಾವಣಾ ಅಕ್ರಮ ನಡೆದಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಪ್ರಾಧಿಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೋರಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರಿಗೆ ಶುಕ್ರವಾರ ಬೆಂಗಳೂರಿನಲ್ಲಿ ಬಿಜೆಪಿ ಮುಖಂಡರು ಮನವಿ ಸಲ್ಲಿಸಿದರು.
ಪ್ರಮುಖರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಅರುಣ್ ಹಿರೇಹಾಳ್ ಸೇರಿ ಮತ್ತಿತತರು ಒಳಗೊಂಡ ಬಿಜೆಪಿ ನಿಯೋಗ ಸ್ಪಂದಿಸಲು ಕೋರಿತು.
‘ನಿಗಮದ ಹಣ ಲೋಕಸಭಾ ಚುನಾವಣೆಯಲ್ಲಿ ಬಳಕೆಯಾಗಿದೆ ಎಂದು ಜಾರಿ ನಿರ್ದೇಶನಾಲಯ ತನ್ನ (ಇ.ಡಿ) ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಎದುರಾಗಿರುವ ಅಪಾಯ. ಸ್ವತಃ ಮುಖ್ಯಮಂತ್ರಿಯೇ ನಿಗಮದಲ್ಲಿ ಹಗರಣವಾಗಿದೆ ಎಂದು ವಿಧಾನಸಭೆಯಲ್ಲಿ ಒಪ್ಪಿದ್ದಾರೆ. ಹೀಗಾಗಿ ಚುನಾವಣೆಯಲ್ಲಿನ ಆಯ್ಕೆ ಅಸಿಂಧು ಎಂದು ಘೋಷಿಸಬೇಕು. ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಅವರನ್ನು ಅನರ್ಹಗೊಳಸಬೇಕು’ ಎಂದು ಅವರು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.