ADVERTISEMENT

ಅತ್ಯಾಚಾರ; ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2019, 14:20 IST
Last Updated 13 ಏಪ್ರಿಲ್ 2019, 14:20 IST

ಹೊಸಪೇಟೆ: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಶನಿವಾರ ರಾಯಚೂರಿನಲ್ಲಿ ಬಂಧಿಸಿದ್ದಾರೆ.

‘ತಾಲ್ಲೂಕಿನ ನಾಗೇನಹಳ್ಳಿಯ ದೇವರಗುಡಿ ಚಂದ್ರಶೇಖರ್‌ ಬಂಧನಕ್ಕೆ ಒಳಗಾದ ವ್ಯಕ್ತಿ. ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದಕ್ಕೆ ಆಕೆಯ ಪೋಷಕರು ಏ. 9ರಂದು ಗ್ರಾಮೀಣ ಠಾಣೆಗೆ ದೂರು ಕೊಟ್ಟಿದ್ದರು. ಆರೋಪಿ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಲಾಗಿತ್ತು. ಒಂದು ತಂಡ ರಾಯಚೂರಿನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸ್‌ ಇನ್‌ಸ್ಪೆಕ್ಟರ್‌ ಪರಸಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ಆರೋಪಿಯು ಸತತ ಮೂರು ತಿಂಗಳು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದರಿಂದ ಬಾಲಕಿ ಅಸ್ವಸ್ಥಗೊಂಡಿದ್ದಳು. ಮುಟ್ಟು ಆಗುವುದು ನಿಂತಿತ್ತು. ಪೋಷಕರು ಆಸ್ಪತ್ರೆಗೆ ಕೊಂಡೊಯ್ದು ತೋರಿಸಿದಾಗ ಬಾಲಕಿ ಗರ್ಭವತಿಯಾಗಿರುವ ವಿಷಯ ಬೆಳಕಿಗೆ ಬಂದಿತ್ತು. ನಂತರ ಬಾಲಕಿ ತಾಯಿ ಠಾಣೆಗೆ ದೂರು ಕೊಟ್ಟಿದ್ದರು. ಆರೋಪಿ ಬಂಧನಕ್ಕೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಏ. 12ರಂದು ಗ್ರಾಮೀಣ ಠಾಣೆ ಎದುರು ಧರಣಿ ನಡೆಸಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.