ADVERTISEMENT

ಜಿಂದಾಲ್‌ಗೆ ಭೂಮಿ ಮಾರಾಟ: ನನ್ನ ನಿಲುವಿಗೆ ಬದ್ಧ ಎಂದ ಸಚಿವ ಆನಂದ್‌ ಸಿಂಗ್

​ಪ್ರಜಾವಾಣಿ ವಾರ್ತೆ
Published 9 ಮೇ 2021, 19:30 IST
Last Updated 9 ಮೇ 2021, 19:30 IST
ಆನಂದ್‌ ಸಿಂಗ್
ಆನಂದ್‌ ಸಿಂಗ್   

ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ): ‘ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡುವುದನ್ನು ಮೊದಲಿಂದಲೂ ವಿರೋಧಿಸಿದ್ದೇನೆ. ಈಗಲೂ ನನ್ನ ನಿಲುವಿಗೆ ಬದ್ಧನಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್ ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದ ತೀರ್ಮಾನ ಪುನರ್ ಪರಿಶೀಲಿಸಲು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಜಿಂದಾಲ್‌ಗೆ ಭೂಮಿ ಮಾರಾಟದ ಬದಲು ಷರತ್ತುಗಳನ್ನು ವಿಧಿಸಿ, ಗುತ್ತಿಗೆ ನೀಡಬಹುದು ಎಂದು ತಿಳಿಸಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಮತ್ತೆ ಚರ್ಚೆಗೆ ಬರಲಿದೆ. ಆಗ ನನ್ನ ಅಭಿಪ್ರಾಯವನ್ನು ತಿಳಿಸಲಿದ್ದೇನೆ’ ಎಂದು ಹೇಳಿದರು.

ಸಿಎಂ ಬದಲಾಯಿಸುವ ಪತ್ರ ನಕಲಿ: ‘ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾಯಿಸುವ ಪತ್ರದ ವಿಚಾರ ನನಗೆ ಗೊತ್ತಿಲ್ಲ. ಯಾವ ಪತ್ರಕ್ಕೂ ನಾನು ಸಹಿ ಮಾಡಿಲ್ಲ. ಮಾಧ್ಯಮಗಳಲ್ಲಿ ತೋರಿಸುತ್ತಿರುವ ಪತ್ರ ನಕಲಿ ಇರಬೇಕು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.