ADVERTISEMENT

ಕೂಡ್ಲಿಗಿ: ಮಾನವ ಕಳ್ಳ ಸಾಗಣೆ ತಡೆ ದಿನ, ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 16:18 IST
Last Updated 30 ಜುಲೈ 2024, 16:18 IST
ಮಾನವ ಕಳ್ಳ ಸಾಗಾಣೆ ತಡೆ ದಿನಾಚರಣೆ ಅಂಗವಾಗಿ ಮಂಗಳವಾರ ಕೂಡ್ಲಿಗಿ ಪಟ್ಟಣದಲ್ಲಿ ಕಾನೂನು ಅರಿವು ನೆರವು ಜಾಗೃತಿ ಜಾಥಾ ನಡೆಸಲಾಯಿತು.
ಮಾನವ ಕಳ್ಳ ಸಾಗಾಣೆ ತಡೆ ದಿನಾಚರಣೆ ಅಂಗವಾಗಿ ಮಂಗಳವಾರ ಕೂಡ್ಲಿಗಿ ಪಟ್ಟಣದಲ್ಲಿ ಕಾನೂನು ಅರಿವು ನೆರವು ಜಾಗೃತಿ ಜಾಥಾ ನಡೆಸಲಾಯಿತು.   

ಕೂಡ್ಲಿಗಿ: ಮಾನವ ಕಳ್ಳ ಸಾಗಾಣಿಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಾಗಿ ಬಲಿಯಾಗುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜೆ.ಯೋಗೇಶ್ ವಿಷಾದಿಸಿದರು.

ತಾಲ್ಲೂಕು ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯ್ತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಾಣೆ ತಡೆ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಕಾನೂನು ಅರಿವು ನೆರವು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮಾಜದಲ್ಲಿ ಮಾನವ ಕಳ್ಳ ಸಾಗಾಣಿಕೆ ಬಹುದೊಡ್ಡ ಸಮಸ್ಯೆಯಾಗಿದೆ. ಮಹಿಳೆಯರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು ಮಕ್ಕಳನ್ನು ಪೋಷಕರು ತುಂಬಾ ಜಾಗೃತೆಯಿಂದ ಬೆಳೆಸಬೇಕು ಎಂದು ಹೇಳಿದರು.

ADVERTISEMENT

ವಕೀಲ ವಿರುಪಾಕ್ಷಪ್ಪ ಉಪನ್ಯಾಸ ನೀಡಿದರು. ನಂತರ ಜಾಗೃತಿ ಜಾಥಾ ನಡೆಯಿತು. ಸಹಾಯಕ ಸರ್ಕಾರಿ ಅಭಿಯೋಜಕಿ ವೈ.ಶಿಲ್ಪಾ, ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಂ.ಮಲ್ಲಿಕಾರ್ಜುನ, ಉಪಾಧ್ಯಕ್ಷ ವೆಂಕಟೇಶ್, ಹೆಚ್ಚುವರಿ ಸರ್ಕಾರಿ ವಕೀಲ ಕೆ.ಜಿ.ಶಿವಪ್ರಸಾದ್, ಕೆ.ಎಚ್.ಎಂ.ಶೈಲಜಾ, ಪಟ್ಟಣ ಪಂಚಾಯ್ತಿ ಆರೋಗ್ಯ ನಿರೀಕ್ಷಕಿ ಗೀತಾ, ರಾಘವೇಂದ್ರ, ಕೆ.ರಾಧಾ, ಶಿಶು ಅಭಿವೃದ್ಧಿ ಯೋಜನೆ ಪ್ರಭಾರ ಅಧಿಕಾರಿ ವಿಜಯಲಕ್ಷಿ ಮುಂತಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.