ADVERTISEMENT

ಎಪಿಎಂಸಿ ನೂತನ ಕಚೇರಿ, ಮಳಿಗೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2019, 11:53 IST
Last Updated 22 ಸೆಪ್ಟೆಂಬರ್ 2019, 11:53 IST
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಆಡಳಿತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳನ್ನು ರಾಜ್ಯ ಕೃಷಿ ಮಾರುಕಟ್ಟೆ ಮಂಡಳಿ ಸದಸ್ಯ ಗಿರೀಶ್‌ ಗೌಡ ಉದ್ಘಾಟಿಸಿದರು
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಆಡಳಿತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳನ್ನು ರಾಜ್ಯ ಕೃಷಿ ಮಾರುಕಟ್ಟೆ ಮಂಡಳಿ ಸದಸ್ಯ ಗಿರೀಶ್‌ ಗೌಡ ಉದ್ಘಾಟಿಸಿದರು   

ಹೊಸಪೇಟೆ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಆಡಳಿತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳನ್ನು ಶನಿವಾರ ರಾಜ್ಯ ಕೃಷಿ ಮಾರುಕಟ್ಟೆ ಮಂಡಳಿ ಸದಸ್ಯ ಗಿರೀಶ್‌ ಗೌಡ ಉದ್ಘಾಟಿಸಿದರು.

’ಬಳ್ಳಾರಿ ಜಿಲ್ಲೆಯಲ್ಲಿ ₹27 ಕೋಟಿ ವೆಚ್ಚದಲ್ಲಿ 27 ಸುಸಜ್ಜಿತ ಸಂತೆ ಮಾರುಕಟ್ಟೆ ನಿರ್ಮಿಸಲಾಗುವುದು. ತಾಲ್ಲೂಕಿನಲ್ಲಿ ನಾಲ್ಕು ಸಂತೆ ಮಾರುಕಟ್ಟೆಗಳ ನಿರ್ಮಾಣಕ್ಕೆ ಸರ್ಕಾರದಿಂದ ₹4 ಕೋಟಿ ಮಂಜೂರಾಗಿದೆ. ತಾಲ್ಲೂಕಿನ ಗರಗ–ನಾಗಲಾಪುರ, ದೇವಲಾಪುರ, ಸೊವೇನಹಳ್ಳಿ ಹಾಗೂ ಗಾದಿಗನೂರಿನಲ್ಲಿ ಸಂತೆ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು‘ ಎಂದು ಗಿರೀಶ್‌ ಗೌಡ ತಿಳಿಸಿದರು.

‘ತಾಲ್ಲೂಕಿನ ಮರಿಯಮ್ಮನಹಳ್ಳಿ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಹರಾಜು ಕಟ್ಟೆಗೆ ಚಾಲನೆ ನೀಡಲಾಗಿದೆ. ನಬಾರ್ಡ್‌ ಯೋಜನೆಯಡಿ ಸಿ.ಸಿ. ರಸ್ತೆ ನಿರ್ಮಾಣ, ಕಂಪ್ಲಿ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಸಾವಿರ ಮೆಟ್ರಿಕ್‌ ಟನ್‌ ಸಾಮರ್ಥ್ಯದ ಗೋದಾಮು, ಮುಚ್ಚು ಹರಾಜು ಕಟ್ಟೆ ನಿರ್ಮಿಸಲಾಗುವುದು’ ಎಂದು ಮಾಹಿತಿ ನೀಡಿದರು.

ADVERTISEMENT

ಎ.ಪಿ.ಎಂ.ಸಿ. ಅಧ್ಯಕ್ಷ ಜಂಬಾನಹಳ್ಳಿ ಪರಶುರಾಮಪ್ಪ, ಉಪಾಧ್ಯಕ್ಷ ಕುರಟಿ ಕೃಷ್ಣಪ್ಪ, ಮುಖಂಡರಾದ ಹಾಲಪ್ಪ, ಕುರಿ ಶಿವಮೂರ್ತಿ, ಎಲ್‌. ಸಿದ್ದನಗೌಡ, ಧರ್ಮೇಂದ್ರ ಸಿಂಗ್‌, ಮೊಹಮ್ಮದ್‌ ಇಮಾಮ್‌ ನಿಯಾಜಿ, ಖಾಜಾ ಹುಸೇನ್‌ ನಿಯಾಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.