
ಪ್ರಜಾವಾಣಿ ವಾರ್ತೆ
ಸಿರುಗುಪ್ಪ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ನಡೆಸಿದ ಕಳೆದ ಶೈಕ್ಷಣಿಕ ಸಾಲಿನ ಪದವಿ ಪರೀಕ್ಷೆಯಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ಉತ್ತಮ ರ‍್ಯಾಂಕ್ ಪಡೆದಿದ್ದಾರೆ.
‘ಕಲಾ ವಿಭಾಗದಲ್ಲಿ ತೆಕ್ಕಲಕೋಟೆ ಶ್ರೀಮತಿ ಹೊನ್ನೂರಮ್ಮ ದಿವಂಗತ ಸಿದ್ದಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾ ಎಲ್. ಶೇ 90.76 ಅಂಕ ಗಳಿಸಿ ಮೂರನೇ ರ‍್ಯಾಂಕ್ ಹಾಗೂ ಜಿ. ಕಾಳಿಂಗಪ್ಪ ಶೇ 90.37 ಅಂಕ ಪಡೆದು ಐದನೇ ರ‍್ಯಾಂಕ್ ಪಡೆದಿದ್ದಾರೆ’ ಎಂದು ಪ್ರಾಚಾರ್ಯ ಟಿ.ವೀರಭದ್ರಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.