ADVERTISEMENT

ಮಾತು ಕೊಟ್ಟಂತೆ ನಡೆದುಕೊಳ್ಳಿ: ‘ಆಶಾ’ಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಮೇ 2025, 13:53 IST
Last Updated 21 ಮೇ 2025, 13:53 IST
ಆಶಾ ಕಾರ್ಯಕರ್ತರಿಗೆ ಮಾಸಿಕ ₹10 ಸಾವಿರಗಳ ವೇತನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಮತ್ತು ಎಐಯುಟಿಯುಸಿ ಸದಸ್ಯರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು
ಆಶಾ ಕಾರ್ಯಕರ್ತರಿಗೆ ಮಾಸಿಕ ₹10 ಸಾವಿರಗಳ ವೇತನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಮತ್ತು ಎಐಯುಟಿಯುಸಿ ಸದಸ್ಯರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು    

ಬಳ್ಳಾರಿ: ಆಶಾ ಕಾರ್ಯಕರ್ತರಿಗೆ ಸರ್ಕಾರ ಮಾತು ಕೊಟ್ಟಂತೆ ಮಾಸಿಕ ₹10 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಮತ್ತು ಎಐಯುಟಿಯುಸಿ ಸದಸ್ಯರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು. 

ಈ ವೇಳೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಘಟಕದ ಉಪಾಧ್ಯಕ್ಷೆ ಎ.ಶಾಂತಾ, ‘ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಕಾನೂನುಗಳನ್ನು ಜಾರಿಗೆ ತರಲು ಹೊರಟಿಸಿದೆ. ಅವುಗಳನ್ನು ಹಿಂಪಡೆಯಬೇಕು. ಮಹಿಳಾ ಕಾರ್ಮಿಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಎಲ್ಲ ವಿಷಯಗಳೊಂದಿಗೆ ಜುಲೈ 9ರಂದು ಸಾರ್ವತ್ರಿಕ ಮುಷ್ಕರ ನಡೆಸಲಿದ್ದೇವೆ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳಲ್ಲಿ ಹೋರಾಟಗಳು ನಡೆದಿವೆ’ ಎಂದರು. 

‘ಆಶಾ ಕಾರ್ಯಕರ್ತರಿಗೆ ₹10 ಸಾವಿರ ವೇತನ ನೀಡುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಆದರೆ, ಆದೇಶ ಇನ್ನೂ ಹೊರಬಿದ್ದಿಲ್ಲ. ಆಶಾ ಕಾರ್ಯಕರ್ತರ ಗೌರವಧನವನ್ನು ತಿಂಗಳಿಗೆ ₹1,500ರಷ್ಟು ಹೆಚ್ಚಿಸುವುದಾಗಿ ಕೇಂದ್ರ ಆರೋಗ್ಯ ಸಚಿವರು ಹೇಳಿದ್ದರು. ಅದನ್ನೂ ಜಾರಿಗೆ ತರಬೇಕು ಎಂದು ಆಗ್ರಹಿಸುತ್ತಿದ್ದೇವೆ’ ಎಂದು ತಿಳಿಸಿದರು.  

ADVERTISEMENT

‘ಕಾರ್ಮಿಕರ, ಮಹಿಳೆಯರ, ರೈತರ ಹಿತವನ್ನು ಸರ್ಕಾರಗಳು ಕಾಯಬೇಕು. 12 ಗಂಟೆ ದುಡಿಮೆಯ ಅವಧಿಯ ಬದಲು 8 ಗಂಟೆಗಳ ದುಡಿಮೆಯ ಅವಧಿಯನ್ನು ಪಾಲಿಸಬೇಕು’ ಎಂದು ಒತ್ತಾಯಿಸಿದರು.  

ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು, ಎಐಯುಟಿಯುಸಿ ಸಂಘಟನೆಯ ಕಾರ್ಯಕರ್ತರು ಹೋರಾಟದಲ್ಲಿದ್ದರು. ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.