ಬಳ್ಳಾರಿ: ‘ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ನಗರದ ವಿವಿಧೆಡೆ ಅನಿರೀಕ್ಷಿತ ದಾಳಿ ನಡೆಸಿ ನಾಲ್ವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ’ ಎಂದು ಯೋಜನಾಧಿಕಾರಿ ಮೌನೇಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದರು.
ಒಟ್ಟು ನಾಲ್ಕು ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ. ಶಾಲೆಗಳಲ್ಲಿ ಅವರ ವಯಸ್ಸಿನ ದಾಖಲೆ ಪಡೆದು ಮಾಲೀಕರ ವಿರುದ್ದ ಬಾಲಕಾರ್ಮಿಕ ಕಾಯ್ದೆ 1986ರ ತಿದ್ದುಪಡಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.