ಬಳ್ಳಾರಿ: ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನುಜಿಲ್ಲೆಯಾದ್ಯಂತ ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ ಆಚರಿಸಿದರು.
ಮುಂಜಾನೆಯೇ ನಗರದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ-ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿದರು.ಪ್ರಾರ್ಥನೆಯ ಬಳಿಕ ಮುಸ್ಲಿಂ ಭಾಂದವರು ಪರಸ್ಪರ ಶುಭಾಶಯ ವಿನಿಮಯ
ಮಾಡಿಕೊಂಡರು. ಸಾಮೂಹಿಕ ಪ್ರಾರ್ಥನೆಯಲ್ಲಿ ಸಚಿವ ನಾಗೇಂದ್ರಅವರು ಬಿಳಿ ಟೋಪಿಯನ್ನು ಧರಿಸಿ ಭಾಗಿಯಾಗಿದ್ದರು.
ಬಳಿಕ ಸಚಿವರು ಮುಸ್ಲಿಂ ಭಾಂದವರಿಗೆ ಶುಭಾಶಯ ಕೋರಿದರು
ಇನ್ನು ಸಾಮಪ್ರಾರ್ಥನೆಯಲ್ಲಿ ಮಕ್ಕಳು ಕೂಡ ಪಾಲ್ಗೊಂಡರು ಬಕ್ರಿದ್ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದ್ ಬಸ್ತೋ ಒದಗಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.