ಕನ್ನಡ
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಮಫಲಕ, ಜಾಹೀರಾತುಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ತಿಳಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮಾಲೀಕರು ಮುದ್ರಣ ಮಾಡುವ ಜಾಹೀರಾತುಗಳಲ್ಲಿ ಕಡ್ಡಾಯವಾಗಿ ಶೇ 60ರಷ್ಟು ಕನ್ನಡ ಭಾಷೆಯನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಹಾಗೂ ಮುದ್ರಣ ಮಾಡುವ ಜಾಹೀರಾತು ಮಾಲೀಕರ ಪರವಾನಗಿಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮುದ್ರಣದಾರರು ಜಾಹೀರಾತು ಮುದ್ರಿಸುವ ಸಮಯದಲ್ಲಿ ಶೇಕಡ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಲು ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ.
ನಾಮಫಲಕದಲ್ಲಿ ಕನ್ನಡ ಭಾಷೆ ನಾಮಫಲಕದ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ ಹಾಗೂ ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡ ಭಾಷೆ ನಾಮಫಲಕ ಮೇಲ್ಭಾಗದಲ್ಲಿರುವಂತೆ ಹಾಗೂ ದೊಡ್ಡದಾಗಿರುವಂತೆ ಅಳವಡಿಸಬೇಕು. ಜನವರಿ 5 ರೊಳಗಾಗಿ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆ ಹಾಗೂ ಮುದ್ರಣ ಮಾಡುವ ಜಾಹೀರಾತು ಮಾಲೀಕರು ಇದನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.